Advertisement

ಉಚಿತ ವಿದ್ಯುತ್ ಕಾಂಗ್ರೆಸ್ ನ ಸುಳ್ಳು ಡಂಗುರ: ಸಚಿವ ಸುನಿಲ್ ಕುಮಾರ್

12:41 PM Jan 13, 2023 | Team Udayavani |

ಬೆಂಗಳೂರು: ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ನೀಡದೆ ಸತಾಯಿಸಿದವರು ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಇಂಧನ ಹಾಗೂ‌ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.

Advertisement

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲಾ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತದ ಹೇಳಿಕೆಯಲ್ಲ. ಎಸ್ಕಾಂಗಳನ್ನು ಖಾಸಗಿಕರಣಗೊಳಿಸುವುದೇ ಈ ಸುಳ್ಳು ಭರವಸೆಯ ಹಿಂದಿರುವ ಉದ್ದೇಶ ಎಂದು ಆರೋಪಿಸಿದ್ದಾರೆ.

ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನೀವು ಅಧಿಕಾರದಲ್ಲಿದ್ದಾಗ ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9000 ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಹಿಮಾಚಲದಿಂದ ಗಾಂಜಾ ತಂದು ಮಂಗಳೂರಲ್ಲಿ ಮಾರಾಟ: ಕಾರ್ಕಳದ ಇಬ್ಬರು ಸೇರಿ ಮೂವರ ಸೆರೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೃಷಿ ಪಂಪ್ ಸೆಟ್ ಗಳಿಗೆ ಹೊಸ ಸಂಪರ್ಕ ನೀಡಿರಲಿಲ್ಲ. ಇದರಿಂದ ರೈತರು ಹಾಗೂ ಕೃಷಿ ವಿಸ್ತರಣೆ ಚಟುವಟಿಕೆಗೆ ತೀವ್ರ ಸಮಸ್ಯೆಯಾಗಿತ್ತು. 2019-17 ರಿಂದ ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ಸಬ್ಸಿಡಿ ಹಣವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡದೇ ಸತಾಯಿಸಿದರು. ಇದರಿಂದ ರೈತರು ಮಾತ್ರವಲ್ಲ ಉದ್ಯಮಕ್ಕೂ ತೊಂದರೆಯಾಯ್ತು. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2019 ರಿಂದ ಇಲ್ಲಿಯವರೆಗಿನ ಹಿಂಬಾಕಿಯೂ ಸೇರಿ 18 ಸಾವಿರ ಕೋಟಿ ರೂ. ಸಬ್ಸಿಡಿ ಹಣವನ್ನು ಎಸ್ಕಾಂಗಳಿಗೆ ನೀಡಿದ್ದೇವೆ. ಇಲಾಖೆಯನ್ನು‌ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಳ್ಳ ಹಿಡಿಸಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೋಡಿ ಈಗ ಉಚಿತ ವಿದ್ಯುತ್ ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ. ದುರಾಡಳಿತ ಹಗರಣದ ಮೂಲಕ ಇಂಧನ ಇಲಾಖೆಯನ್ನು ನಷ್ಟಕ್ಕೆ‌ ದೂಡಿದ್ದೇ ನಿಮ್ಮ ಸರ್ಕಾರದ ಮಹತ್ ಸಾಧನೆ ಎಂದು ಟೀಕಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next