ಬೆಳ್ತಂಗಡಿ: ರಾಜ್ಯ ಇಂಧನ ಸಚಿವ ವಿ.ಸುನಿಲ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೆಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಕ್ಷೇತ್ರದ ಪರವಾಗಿ ಡಿ.ಸುರೇಂದ್ರ ಕುಮಾರ್ ಸ್ವಾಗತಿಸಿದರು. ಕ್ಷೇತ್ರದ ವತಿಯಿಂದ ಸಚಿವರನ್ನು ಧರ್ಮಾಧಿಕಾರಿ ಡಾ| ಹೆಗ್ಗಡೆ ಗೌರವಿಸಿದರು.
ಶಾಸಕ ಹರೀಶ್ ಪೂಂಜ ವಿ.ಸ.ಕ್ಷೇತ್ರದ ಪರವಾಗಿ ಸ್ವಾಗತಿಸಿದರು. ಡಾ| ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಹಾಗೂ ದೇವಳ ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್ ಕ್ಷೇತ್ರದ ಪರವಾಗಿ ಬರಮಾಡಿಕೊಂಡರು.
ಇದನ್ನೂ ಓದಿ:ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ್ರಧಾನಮಂತ್ರಿಯ ಹೊಸ 15 ಅಂಶ ಕಾರ್ಯಕ್ರಮ ಅನುಷ್ಠಾನದ ಉಡುಪಿ ಜಿಲ್ಲಾ ಮಟ್ಟದ ಸ್ಥಾಯೀ ಸಮಿತಿ ನಾಮ ನಿರ್ದೇಶಿತ ಸದಸ್ಯ ನೇಮಿರಾಜ ಆರಿಗ, ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ, ಗ್ರಾ.ಪಂ. ಸದಸ್ಯ ಭರತ್ ಕುಮಾರ್ ಜೈನ್, ಉದ್ಯಮಿಗಳಾದ ಸಂಪತ್ ಜೈನ್, ಮಹೇಂದ್ರ ವರ್ಮ ಮತ್ತಿತರರು ಉಪಸ್ಥಿತರಿದ್ದರು.