Advertisement

ಕೋವಿಡ್-19: ಸೋಂಕು ತಾಗಿದರೂ ಮನೆಯಲ್ಲಿದ್ದ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು

02:13 PM Oct 11, 2020 | keerthan |

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಕೋವಿಡ್-19 ಸೋಂಕು ದೃಢವಾಗಿದ್ದರೂ ಹೋಮ್ ಐಸೋಲೇಶನ್ ನಲ್ಲಿದ್ದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಸ್ವತಃ ಸಚಿವರು ಟ್ವಿಟ್ಟರ್ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಾನು ವೈದ್ಯರ ನಿಗಾದಲ್ಲಿದ್ದು, ಯಾರೂ ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ.

“ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ” ಎಂದು ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next