Advertisement

ಕೋವಿಡ್ ನಿಂದ ಗುಣಮುಖರಾದ ಸಚಿವ ಸುರೇಶ್ ಕುಮಾರ್: ಆಸ್ಪತ್ರೆಯಿಂದ ಡಿಸ್ಚಾರ್ಜ್

03:47 PM Oct 18, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ತಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಎಸ್.ಸುರೇಶ್ ಕುಮಾರ್ ಸದ್ಯ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಸಚಿವ ಸುರೇಶ್ ಕುಮಾರ್ ಅವರಿಗೆ ಅಕ್ಟೋಬರ್ 5ರಂದು ಕೋವಿಡ್ ಪಾಸಿಟಿವ್ ವರದಿಯಾಗಿತ್ತು. ಹೋಮ್ ಐಸೋಲೇಶನ್ ನಲ್ಲಿದ್ದ ಅವರು ಅಕ್ಟೋಬರ್ 10ರಂದು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದು. ಸದ್ಯ ಚೇತರಿಸಿಕೊಂಡಿರುವ ಅವರು ಶನಿವಾರ ರಾತ್ರಿ ಮನೆಗೆ ಮರಳಿದ್ದಾರೆ.

ಈ ಬಗ್ಗೆ ಸ್ವತಃ ಸಚಿವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದ್ದೇನೆ. ಸೋಮವಾರ, ಅಕ್ಟೋಬರ್ 5 ರಂದು ನನಗೆ ಕೋವಿಡ್ ಸೋಂಕು ತಗುಲಿದೆ ಎಂದು ತಿಳಿದಾಗ ಬಿಬಿಎಂಪಿ ತಂಡದ ಸಲಹೆಯಂತೆ ನಾನು ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರು ಸೂಚಿಸಿದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದೆ.‌ ಆದರೆ ಅಕ್ಟೋಬರ್ 10 ರಂದು ನನ್ನ ಮನೆಗೆ ಬಂದ ವೈದ್ಯರೊಬ್ಬರು ನನ್ನ ಉಸಿರಾಟದಲ್ಲಿ ವ್ಯತ್ಯಾಸವನ್ನು ಗಮನಿಸಿ ತಕ್ಷಣ ಪರೀಕ್ಷೆಗೆ ಒಳಗಾಗ ಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ:ಲಸಿಕೆ ವಿತರಣೆಗೆ ಚುನಾವಣೆಯಂತೆ ಸಿದ್ಧತೆ  : ಆರೋಗ್ಯ ಇಲಾಖೆಗೆ ಪ್ರಧಾನಿ ಮೋದಿ ಸೂಚನೆ

ಅವರ ಸೂಚನೆ ಮೇರೆಗೆ ನಾನು ಅವರೊಡನೇ ಹೋಗಿ ಶ್ವಾಸಕೋಶದ ಸಿಟಿ ಸ್ಕ್ಯಾನ್ ಗೆ ಒಳಗಾದೆ. ಆಗ ನನ್ನ ಶ್ವಾಸಕೋಶಕ್ಕೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಸೋಂಕು ಹರಡಿದೆ ಎಂದು ತಿಳಿದುಬಂತು. ಕಳೆದ ಎಂಟು ದಿನಗಳಿಂದ ನನಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಿ, ಶುಶ್ರೂಷೆ ಮಾಡಿ ನನ್ನನ್ನು ಗುಣಮುಖನಾಗುವ ಹಾದಿಗೆ ತಂದ ಡಾ. ಶಶಾಂಕ್, ಡಾ. ಶ್ರೀನಾಥ್, ಡಾ. ಪೂರ್ಣ ಪ್ರಸಾದ್, ಡಾ. ಕೃಪೇಶ್ ಮತ್ತು ಎಲ್ಲಾ ದಾದಿಯರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

Advertisement

ನನಗೆ ಇನ್ನೂ ಎರಡು ವಾರಗಳ ಕಾಲ ಮನೆಯಿಂದ ಹೋಗಬಾರದು ಎಂಬ ಷರತ್ತಿನ ಮೇಲೆ ನನ್ನನ್ನು ಬಿಡುಗಡೆ ಮಾಡಿದ್ದಾರೆ. ನಾನು ಡಾಕ್ಟರ್ ಮಾತು ಪಾಲಿಸುತ್ತೇನೆ ಎಂದು ಮಾತು ಕೊಟ್ಟು ಮನೆ ಸೇರಿದ್ದೇನೆ. ಮನೆಯಲ್ಲಿ ಕೆಲ ಚಿಕಿತ್ಸೆ‌ ಮುಂದುವರೆಯಲಿದ ಎಂದು ಸಚಿವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next