Advertisement
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯವನ್ನು ಒಮ್ಮೆ ಯೋಚಿಸಿ ಶಾಲೆಗಳಿಗೆ ಮಕ್ಕಳನ್ನು ಕಳಿಸಬೇಕೆಂದು ಆಗ್ರಹಿಸಿದ್ದಾರೆ.
Related Articles
Advertisement
ಶಾಲೆಗಳನ್ನು ಆರಂಭಿಸುತ್ತಿರುವುದು ಒಂದು ದೊಡ್ಡ ಸವಾಲು. ಕಳೆದ ಜೂನ್ – ಜುಲೈ ತಿಂಗಳುಗಳಲ್ಲಿ ನಡೆದ ಎಸ್ ಎಸ್ಎಲ್ ಸಿ ಪರೀಕ್ಷೆಗಳೂ ಒಂದು ದೊಡ್ಡ ಸವಾಲಾಗಿದ್ದವು. ಆದರೆ ಆಗ ನಮ್ಮ ಎಲ್ಲ ಜನಪ್ರತಿನಿಧಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ನೀಡಿದ ಸಹಕಾರದಿಂದ ದೊಡ್ಡ ಸವಾಲನ್ನು ಎದುರಿಸಲು ಸಾಧ್ಯವಾಯಿತು. ಅದೇ ರೀತಿ ಈಗಿನ ಶಾಲೆಗಳನ್ನು ನಡೆಸುವ ಸವಾಲನ್ನೂ ಸಹ ಯಶಸ್ವಿಯಾಗಿ ಎದುರಿಸಲು ಜನಪ್ರತಿನಿಧಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಎಲ್ಲಾ ಸಹಕಾರ ನೀಡುತ್ತಾರೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಎಸ್ ಎಸ್ಎಲ್ ಸಿ ಪರೀಕ್ಷೆಗಳು ನಡೆದಾಗ ನಾಡಿನ ಎಲ್ಲಾ ಪತ್ರಿಕೆಗಳು ಹಾಗೂ ಸುದ್ದಿ ಚಾನೆಲ್ ಗಳು ನೀಡಿದ ಬೆಂಬಲ ಮರೆಯುವಂತಿಲ್ಲ. ನಮ್ಮ ಮಕ್ಕಳ ಆರೋಗ್ಯ ಹಾಗೂ ಅವರ ಶೈಕ್ಷಣಿಕ ಭವಿಷ್ಯ ಎರಡನ್ನು ಜೊತೆಜೊತೆಯಾಗಿ ಇಂದು ಜೋಪಾನವಾಗಿ ಗಮನಿಸಿ ಅಗತ್ಯ ವ್ಯವಸ್ಥೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಈ ಕಾರ್ಯ ಯಶಸ್ವಿಯಾಗಲು ಎಲ್ಲರ ಸಹಕಾರ ಸಹಾಯ ಕೋರುತ್ತೇನೆ ಎಂದು ಸುರೇಶ್ ಕುಮಾರ್ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.