Advertisement
ಶುಕ್ರವಾರ ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿಯಲ್ಲಿ ವಿದ್ಯಾಗಮ ಯೋಜನೆ ಕುರಿತಂತೆ ರಾಜ್ಯದ ಎಲ್ಲ ಡಿಡಿಪಿಐ, ಡಯಟ್ ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾರ್ಗದರ್ಶನ ನೀಡಿ, ಯೋಜನೆಯ ರೂಪುರೇಷೆಗಳನ್ನು ವಿವರಿಸಿ ಈ ಯೋಜನೆಯ ಯಶಸ್ಸಿಗೆ ಪ್ರತಿಯೊಬ್ಬರೂ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕು ಎಂದರು.
Related Articles
Advertisement
ಫೋನ್ ನಲ್ಲಿ, ಟಿವಿಗಳಲ್ಲಿ, ಪಡಸಾಲೆಗಳಲ್ಲಿ, ಶಾಲಾವರಣಗಳಲ್ಲಿ, ಮರಗಳ ನೆರಳಿನಲ್ಲಿ ನಡೆಸಬಹುದಾದ ಈ ತರಗತಿಗಳಿಗೆ ಅನುಕೂಲವಾಗುವಂತೆ ಶಿಕ್ಷಕರು ಕಲಿಕಾ ಸಾಮಗ್ರಿಗಳನ್ನು ರೂಪಿಸಿಕೊಳ್ಳಬೇಕು. ನಮ್ಮ ಇಲಾಖೆಗಾಗಿಯೇ ಪ್ರತ್ಯೇಕ ಎರಡು ದೂರದರ್ಶನ ಚಾನೆಲ್ ಗಳನ್ನು ಕೇಳಿದ್ದು, ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರೆದಿದೆ ಎಂದೂ ಸುರೇಶ್ ಕುಮಾರ್ ತಿಳಿಸಿದರು.
ಯಾವುದೇ ಪ್ರಮಾಣ ಪತ್ರ ಕೇಳದೆ ದಾಖಲಾತಿ: ಶಾಲೆಗೆ ಈ ವೇಳೆಗೆ ರಾಜ್ಯದಲ್ಲಿ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗಬೇಕಿತ್ತು. ಆದರೆ ಕೋವಿಡ್ ನಿಂದಾಗಿ ಅದು ಸಾಧ್ಯವಾಗಿಲ್ಲ. ಹಾಗಾಗಿ ಯಾವುದೇ ದಾಖಲೆಗಳನ್ನು ಅಪೇಕ್ಷಿಸದೇ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಬೇಕು. ಯಾವ ದಿನವೇ ಆಗಲಿ ಶಾಲೆಗೆ ದಾಖಲು ಅಪೇಕ್ಷಿಸಿ ಬರುವರನ್ನೂ ಸಹ ದಾಖಲಿಸಿಕೊಳ್ಳಬೇಕು. ಪೋಷಕರು ಹೇಳುವ ಮಾತಿನ ಮೂಲಕವೇ ಮಕ್ಕಳನ್ನು ದಾಖಲಿಸಿಕೊಳ್ಳಬೇಕು. ಆ. 10 ರಿಂದ 15 ರವರೆಗೆ ಮಕ್ಕಳ ಶಾಲಾ ದಾಖಲಾತಿ ಅಂದೋಲನದ ಮಾದರಿಯಲ್ಲಿ ನಡೆಯಬೇಕು. ಆ ನಂತರವೂ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಪ್ರಕ್ರಿಯೆ ಮುಂದುವರೆಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದರು.
ಈಗಾಗಲೇ ಶಾಲಾ ಮಕ್ಕಳಿಗೆ ಪುಸ್ತಕ, ನೋಟ್ ಬುಕ್ ಗಳನ್ನು ಒದಗಿಸಲಾಗಿದೆ. ಇನ್ನೂ ಅಗತ್ಯವಿರುವವರು ತಮ್ಮ ವ್ಯಾಪ್ತಿಯ ಬಿಇಒಗಳನ್ನು ಸಂಪರ್ಕಿಸಿ ಪುಸ್ತಕಗಳನ್ನು ಪಡೆಯಬಹುದಾಗಿದೆ ಎಂದು ಅವರು ಶಿಕ್ಷಕರಿಗೆ ಸಲಹೆ ನೀಡಿದರು. ಪುಸ್ತಕ ತಲುಪದ ಕಡೆಗಳಿಗೆ ತಕ್ಷಣವೇ ಮಕ್ಕಳ ಮನೆಗೆ ಪುಸ್ತಕ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಬಿಇಒಗಳಿಗೆ ಸಚಿವರು ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ.ಜಗದೀಶ್ ವಿದ್ಯಾಗಮ ಯೋಜನೆಯ ಯಾವ ರೀತಿಯಲ್ಲಿ ಕೈಗೊಳ್ಳಬೇಕು, ಅದಕ್ಕಾಗಿ ಅನುಸರಿಸಬೇಕಾದ ನಿಯಮಗಳು, ಸಿದ್ಧತೆಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳನ್ನು ನಿವೇದಿಸಿ ಪರಿಹಾರಗಳನ್ನು ಕಂಡುಕೊಂಡರು.
ಎಸ್ಎಸ್ಎ ರಾಜ್ಯ ಯೋಜನಾಧಿಕಾರಿ ದೀಪಾ ಚೋಳನ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.