Advertisement
ಸೋಮವಾರ ಬೆಳಗ್ಗೆ ತಮ್ಮ ಕಚೇರಿಯಿಂದ ತಾವೇ ಫೋನ್‍ನಲ್ಲಿ ಸಂಪರ್ಕಿಸಿ, ಮಕ್ಕಳ ಪರೀಕ್ಷಾ ಸಿದ್ಧತೆ, ಆರೋಗ್ಯ ಕುರಿತು ವಿಚಾರಿಸಿದರಲ್ಲದೇ ಶಿಕ್ಷಣ ಇಲಾಖೆ ವತಿಯಿಂದ ದೂರದರ್ಶನ ಮತ್ತು ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಇಷ್ಟರಲ್ಲಿಯೇ ಬಿತ್ತರಿಸಲಾಗುವುದಿದ್ದು, ಇದನ್ನು ಅದನ್ನು ಅನುಸರಿಸಬೇಕೆಂದು ಸಲಹೆ ನೀಡಿದರು.
Related Articles
Advertisement
ಕಲ್ಬುರ್ಗಿಯ ಮಲ್ಲಿಕಾರ್ಜುನ, ಸಹನಾ, ಬೆಂಗಳೂರಿನ ಸಿರಿ ಶಾಲೆಯ ಧನಲಕ್ಷ್ಮಿ, ವಾಣಿ ಸ್ಕೂಲ್‍ನ ಹರ್ಷಿತಾ, ಹೋಲಿ ಏಂಜಲ್ಸ್ ಶಾಲೆಯ ಅಮೋಘ, ಶಿವಮೊಗ್ಗದ ಆದಿ ಚುಂಚನಗಿರಿ ಶಾಲೆಯ ಎನ್. ಎಸ್. ಶ್ರದ್ಧಾ ಒಡೆಯರಪುರ… ಹೀಗೆ ರಾಜ್ಯದ ವಿವಿಧ ಭಾಗಗಳ 10ನೇ ತರಗತಿ ಮಕ್ಕಳನ್ನು ಸಚಿವರು, ಇವತ್ತು ಎನ್ ಓದಿದೆ, ಊಟ ತಿಂಡಿ ಚೆನ್ನಾಗಿ ಮಾಡು, ತಂದೆ ತಾಯಿಗೆ ಒಳ್ಳೆ ಹೆಸರು ತೆಗೆದುಕೊಂಡು ಬಾ, ಹಳೆ ಪ್ರಶ್ನೆ ಪತ್ರಿಕೆಗಳ ರಿವಿಜನ್ ಮಾಡು, ಯಾವ ವಿಷಯ ಇಷ್ಟ, ಯಾವುದು ಕಷ್ಟ ಎಂದು ವಿಚಾರಿಸಿದರಲ್ಲದೇ, ನಾನು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವಾಗಲೇ ಇಂತಹ ಲಾಕ್‍ಡೌನ್ ಪರಿಸ್ಥಿತಿ ಬಂತಲ್ಲ ಎಂದು ಬೇಸರಿಸಿಕೊಳ್ಳಬೇಡ ಎಂದು ಹೇಳಿ ಧೈರ್ಯ ತುಂಬಿದರು. ಸಚಿವರೊಂದಿಗೆ ಮಾತನಾಡಿದ ಮಕ್ಕಳು ಆ ಕಡೆಯಿಂದ ಸಂತೋಷದಿಂದ ಫುಳಕಗೊಂಡರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಬೇಕಾ, ಬೇಡವೇ ಎಂದು ಪ್ರತಿಯೊಬ್ಬ ಮಕ್ಕಳನ್ನು ಕೇಳಿದಾಗ, ಪರೀಕ್ಷೆ ಬೇಕು ಸಾರ್, ನಾವು ಬರೆಯುತ್ತೇವೆ ಎಂದು ಹೇಳಿದ್ದು ಸಚಿವರಿಗೆ ಸಂತಸ ತಂದಿತು. ಸಚಿವರೊಂದಿಗೆ ಮಾತನಾಡಿದ ಮಕ್ಕಳಲ್ಲಿ ಅಧಿಕಾರಿಗಳ ಮಕ್ಕಳು, ಹಮಾಲರ ಮಕ್ಕಳು, ಶಿಕ್ಷಕರ ಮಕ್ಕಳು, ಖಾಸಗಿ ಕಂಪನಿಗಳ ನೌಕರರ ಮಕ್ಕಳು, ಮನೆ ಕೆಲಸದವರ ಮಕ್ಕಳು ಸೇರಿದಂತೆ ನಾನಾ ಸಾಮಾಜಿಕ ಸ್ತರಗಳಿಗೆ ಸೇರಿದವರಾಗಿದ್ದು, ಸಚಿವರು ತಮ್ಮದೇ ಆಪ್ತ ಧಾಟಿಯಲ್ಲಿ ಮಾತನಾಡಿ ಎಲ್ಲರಲ್ಲೂ ಆತ್ಮ ವಿಶ್ವಾಸ ಮೂಡಿಸಿದರು. ತಮ್ಮೆಲ್ಲರ ಇಚ್ಛೆಯಂತೆ ಪರೀಕ್ಷೆ ನಡೆದೇ ನಡೆಯುತ್ತದೆ, ಯಾವುದೇ ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ಚೆನ್ನಾಗಿ ಓದಿಕೊಳ್ಳಿ ಎಂದರು.