Advertisement

ಎಸ್ಎಸ್ಎಲ್ ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿಯಲ್ಲಿ ಶಿಕ್ಷಣ ಸಚಿವರಿಂದ ಪ್ರಾರ್ಥನೆ

05:52 PM Jul 09, 2020 | keerthan |

ಬಂಟ್ವಾಳ: ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಜು. 10ರಂದು ಬಂಟ್ವಾಳಕ್ಕೆ ಆಗಮಿಸಿ ಎಸ್ಎಸ್ಎಲ್ ಸಿ ಪರೀಕ್ಷೆ ಯಶಸ್ಸಿನ ಹಿನ್ನೆಲೆಯಲ್ಲಿ ಪೊಳಲಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.

Advertisement

ಈ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಸಚಿವ ಸುರೇಶ್ ಕುಮಾರ್ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ನಡೆಸಲಾಗಿತ್ತು. ಜೂನ್ 25ರಿಂದ ಜುಲೈ 4ರ ವರೆಗೆ ಬಹುತೇಕ ಯಶಸ್ವಿಯಾಗಿ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next