Advertisement

‘ಉಪವಾಸ ಸಾಯೋದು ಒಳ್ಳೆಯದು: ವಿವಾದ ಸೃಷ್ಠಿಸಿದ ಸಚಿವ ಉಮೇಶ್ ಕತ್ತಿ ಮಾತು

04:36 PM Apr 28, 2021 | Team Udayavani |

ಬೆಳಗಾವಿ :  ಕೋವಿಡ್ ಮಹಾಮಾರಿ ಸೃಷ್ಠಿಸಿರುವ ಬಿಕ್ಕಟ್ಟಿನಿಂದ ಜನ ಸಂಕಷ್ಟದಲ್ಲಿದ್ದರೆ ಆಹಾರ ಸಚಿವ ಉಮೇಶ್ ಕತ್ತಿ ಮಾತ್ರ ಉಡಾಫೆ ಉತ್ತರ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

Advertisement

ಆಗಿದ್ದೇನು ?

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಂಘದ ಕಾರ್ಯಕರ್ತ ಈಶ್ವರ್ ಪಡಿತರ ಅಕ್ಕಿ ಕಡಿತಗೊಳಿಸಿರೋದನ್ನು ಪ್ರಶ್ನಿಸಿದರು. ಈ ವೇಳೆ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜತೆಗೆ ಜೋಳ ಕೊಡ್ತಿವಿ. ಲಾಕ್​ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಉಮೇಶ್ ಕತ್ತಿ ಹೇಳಿದ್ರು.

ಲಾಕ್​ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ? ಎಂದು ಈಶ್ವರ್ ಪ್ರಶ್ನಿಸಿದಕ್ಕೆ ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಅಹಂಕಾರದ ಮಾತುಗಳನ್ನಾಡಿದ್ದಾರೆ. ಆಹಾರ ಸಚಿವರ ಈ ಆಡಿಯೋ ವೈರಲ್ ಆಗಿದೆ.

ಹೇಳಿಕೆಗೆ ಸಮರ್ಥನೆ:

Advertisement

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ ಉಮೇಶ್ ಕತ್ತಿ, ಯೋಜನೆ ಏನು ಇದೆಯೋ ಅದನ್ನೇ ಹೇಳಿದ್ದೇನೆ. ಕರೆ ಮಾಡಿ ವ್ಯಕ್ತಿ ಸತ್ತೋಗೋದಾ ಎಂದು ಕೇಳಿದ ಅದಕ್ಕೆ ನಾನು ಸತ್ತೋಗಿ ಎಂದು ಹೇಳಿದ್ದೇನೆ. ಅದಕ್ಕಿಂತ ಬೇರೆ ಇನ್ನೇನು ಹೇಳಲಿ. ಬೇಡ ಎಂದು ಹೇಳುವಷ್ಟು ದೊಡ್ಡ ಮನಸ್ಸು ನನಗಿಲ್ಲ. ರಾಜ್ಯದಲ್ಲಿ ಊಟ ಸಿಗದೆ ಯಾರೂ ಸಾಯಬಾರದು. ಮುಖ್ಯಮಂತ್ರಿಗಳು ನನಗೆ ಒಳ್ಳೆಯ ಖಾತೆ ಕೊಟ್ಟಿದ್ದಾರೆ ಎಂದು ಬೆಳಗಾವಿಯಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಇನ್ನು ಉಮೇಶ್ ಕತ್ತಿ ಅವರು ದರ್ಪದ ಮಾತಿಗೆ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಇನ್ನು ತಮ್ಮ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡಿರುವ ಉಮೇಶ್ ಕತ್ತಿ, ಕ್ಷಮೆ ಯಾಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next