Advertisement
ಜಿಪಂ ನೂತನ ಸಭಾಭವನದಲ್ಲಿ ಸೋಮವಾರ ಪ್ರವಾಹ ಮುಂಜಾಗ್ರತಾ ಕ್ರಮ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರವಾಹದಿಂದ 188 ಗ್ರಾಮಗಳು ಭಾದಿತಗೊಳ್ಳುತ್ತಿದ್ದು, ಅವುಗಳ ಮೇಲೆ ನಿಗಾವಹಿಸಬೇಕು. ಪ್ರವಾಹ ಉಂಟಾದಲ್ಲಿ ಜನರ ಸ್ಥಳಾಂತರಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗ್ರತವಾಗಿ ಗುರುತಿಸಿದ 259 ಕಾಳಜಿ ಕೇಂದ್ರಗಳ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ತಿಳಿಸಿದರು. ಜಿಲ್ಲೆಯಲ್ಲಿ ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗದಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಜಿಲ್ಲಾ ಅಧೀಕ್ಷಕ ಅಭಿಯಂತರ ಕಾಶಿನಾಥ ಹಿರೇಮಠ ಅವರಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸೂಚಿಸಿದರು.
Related Articles
Advertisement
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್. ದೇಸಾಯಿ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 466 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 317 ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದರೆ ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊದಲನೇ ಅಲೆಯಲ್ಲಿ 136 ಜನ ಮೃತಪಟ್ಟರೆ, 2ನೇ ಅಲೆಯಲ್ಲಿ 178 ಜನ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ 531997 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ. ಅದರಲ್ಲಿ ಕೋವಾಕ್ಸಿನ್ 113529, ಕೋವಿಶಿಲ್ಡ್ 418468 ಡೋಸ್ ನೀಡಲಾಗಿದೆ ಎಂದು ತಿಳಿಸಿದರು.
ಶಾಸಕ ವೀರಣ್ಣ ಚರಂತಿಮಠ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಸಿದ್ದು ಹುಲ್ಲೊಳ್ಳಿ ಮುಂತಾದವರು ಉಪಸ್ಥಿತರಿದ್ದರು.