Advertisement
ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Related Articles
Advertisement
“ನನ್ನ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನ ಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸು ತ್ತೇನೆ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ ದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರೂ ಸಂತಾಪ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆಗೆ ಸಚಿವರ ದೌಡುಕತ್ತಿ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆ ಸಚಿವರಾದ ಆರ್. ಅಶೋಕ್, ಡಾ| ಸುಧಾಕರ್, ಮುನಿರತ್ನ, ಸಿ.ಸಿ. ಪಾಟೀಲ್ ಸಹಿತ ಹಲವು ನಾಯಕರು ಆಸ್ಪತ್ರೆಗೆ ಧಾವಿಸಿದರು. ಸಿಎಂ ಕನಸು ಕಂಡಿದ್ದರು
ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸುತ್ತಲೇ ಇದ್ದ ಕತ್ತಿ ಅವರು, ಪ್ರತ್ಯೇಕ ರಾಜ್ಯದ ಬಗ್ಗೆ ಮಾತ ನಾಡುತ್ತಲೇ ಇದ್ದರು. ಹಾಗೆಯೇ ಆ ರಾಜ್ಯಕ್ಕೆ ನಾನೇ ಮೊದಲು ಸಿಎಂ ಆಗುತ್ತೇನೆ ಎಂದಿದ್ದರು.