Advertisement

ಹೃದಯಾಘಾತದಿಂದ ಸಚಿವ ಉಮೇಶ್‌ ಕತ್ತಿ ನಿಧನ

01:25 AM Sep 07, 2022 | Team Udayavani |

ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ನಿಧನರಾಗಿದ್ದಾರೆ.

Advertisement

ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ನಾಲ್ಕೈದು ಬಾರಿ ಹೃದಯ ತಪಾಸಣೆ ನಡೆಸಿದರೂ ಯಾವುದೇ ಫಲ ನೀಡಿಲ್ಲ ಎಂದು ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ.

ಕತ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಪ್ರಮುಖ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

“ನನ್ನ ಸಹೋದ್ಯೋಗಿ ಉಮೇಶ್‌ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನ ಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸು ತ್ತೇನೆ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್‌ ಮಾಡಿ ದ್ದಾರೆ. ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರೂ ಸಂತಾಪ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಸಚಿವರ ದೌಡು
ಕತ್ತಿ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆ ಸಚಿವರಾದ ಆರ್‌. ಅಶೋಕ್‌, ಡಾ| ಸುಧಾಕರ್‌, ಮುನಿರತ್ನ, ಸಿ.ಸಿ. ಪಾಟೀಲ್‌ ಸಹಿತ ಹಲವು ನಾಯಕರು ಆಸ್ಪತ್ರೆಗೆ ಧಾವಿಸಿದರು.

ಸಿಎಂ ಕನಸು ಕಂಡಿದ್ದರು
ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸುತ್ತಲೇ ಇದ್ದ ಕತ್ತಿ ಅವರು, ಪ್ರತ್ಯೇಕ ರಾಜ್ಯದ ಬಗ್ಗೆ ಮಾತ ನಾಡುತ್ತಲೇ ಇದ್ದರು. ಹಾಗೆಯೇ ಆ ರಾಜ್ಯಕ್ಕೆ ನಾನೇ ಮೊದಲು ಸಿಎಂ ಆಗುತ್ತೇನೆ ಎಂದಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next