Advertisement
ಶನಿವಾರ ಸಂಜೆ ಪ್ರವಾಹ ಪೀಡಿತ ನಂದಗಾಂವ ಮತ್ತು ಢವಳೇಶ್ವರ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅವಲೋಕ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಘಟಪ್ರಭಾ ನದಿಗೆ ಸದ್ಯ ೧ ಲಕ್ಷ ೩೭ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನೀರು ಸುತ್ತುವರೆದ ಕಾರಣ ಹಳೆ ನಂದಗಾಂವ ಗ್ರಾಮದಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಜೊತೆಗೆ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಇರಲು ಅನುಕೂಲ ಇಲ್ಲದವರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಳ್ಳಲು ವಿನಂತಿಸಿದರು. ಆಸರೆ ಮನೆ ಹಂಚಿಕೆ ಸಮಸ್ಯೆಯನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಲು ಜಮಖಂಡಿ ಎಸಿ ಸಿದ್ದು ಹುಲ್ಲೋಳ್ಳಿ ಅವರಿಗೆ ಸೂಚಿಸಿದರು.
Advertisement
ಆಸರೆ ಮನೆಗಳಿಗೆ ಸ್ಥಳಾಂತರಗೊಳ್ಳಿ : ಉಸ್ತುವಾರಿ ಸಚಿವ ಉಮೇಶ್ ಕತ್ತಿ
08:54 PM Jul 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.