Advertisement
ಬಡಾವಣೆ ನಿರ್ಮಾಣಕ್ಕೆ ಅಗತ್ಯ ಜಮೀನು ಸಿಗುತ್ತಿಲ್ಲ. ಜತೆಗೆ ಭೂಮಿ ದರ ಹೆಚ್ಚಳಗೊಂಡಿದೆ. ಹೀಗಾಗಿ, ಗೃಹ ಮಂಡಳಿ ವತಿಯಿಂದ ಬಡಾವಣೆ ರಚನೆ ಕಷ್ಟ. ಆದರೆ ಕನಿಷ್ಠ 50 ಎಕರೆ ಜಮೀನು ಇರುವ ಮಾಲಕರು ಮುಂದೆ ಬಂದರೆ ಖಾಸಗಿ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
Related Articles
Advertisement
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆಯಡಿ 48 ಸಾವಿರ ಮನೆಗಳ ನಿರ್ಮಾಣ ಭರದಿಂದ ಸಾಗಿದ್ದು, 1,967 ಮನೆಗಳನ್ನು ಈ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು. ಈ ವರ್ಷದಲ್ಲಿ 20 ಸಾವಿರ ಮನೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಬಲವಂತದ ಭೂಸ್ವಾಧೀನ ಇಲ್ಲ; ಸಚಿವ ನಿರಾಣಿ :
ಬೆಂಗಳೂರು: ಯಾವುದೇ ಕಾರಣಕ್ಕೂ ಕೈಗಾರಿಕೆ ಉದ್ದೇಶಕ್ಕೆ ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ರೈತರಿಗೆ ಭರವಸೆ ನೀಡಿದರು. ಗುರುವಾರ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಅವರು ಈ ವಿಷಯ ತಿಳಿಸಿದರು.