ಕಲಬುರಗಿ: ಶಿವಮೊಗ್ಗದವರ ಜಗಳ ಅಂದರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಜಗಳ ಒಂದು ಹೆಜ್ಜೆ ಮುಂದೆ ಹೋಗಿರುವುದು ಸರಿಯಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಈಶ್ವರಪ್ಪನವರು ಸಿಎಂ ವಿರುದ್ದ ಬಹಿರಂಗವಾಗಿ ಹೇಳಿಕೆ ಮಾಡಿರುವುದು ಸರಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಪಕ್ಷದ ವರಿಷ್ಠರು ಎರಡು ದಿನದಲ್ಲಿ ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ನಮಗೆ ಬೇರೆ ದಾರಿಯಿಲ್ಲ, ಕೋವಿಡ್ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಸುಧಾಕರ್
ಅವರಿಬ್ಬರೂ ಒಂದೇ ಜಿಲ್ಲೆಯವರು. ಒಂದೇ ಕಡೆ ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ, ಹತ್ತಾರು ಸಲ ಈ ಹಿಂದೆ ಕುಳಿತಿದ್ದಾರೆ. ನಾಲ್ಕು ಗೋಡೆಗಳ ನಡುವೆ ಯಾವ್ಯಾವ ರೀತಿ ನಡೆದುಕೊಂಡಿದ್ದಾರೆಂಬುದು ಗೊತ್ತಿದೆ ಎಂದು ಸೋಮಣ್ಣ ಬಾಂಬ್ ಸಿಡಿಸಿದರು.
17ರಂದು ಚುನಾವಣೆ ಮುಗಿದ ನಂತರ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿವೆ. ಬಹಿರಂಗವಾಗಿ ಹೇಳಿಕೆ ಬೇಡ. ಹೀಗಾಗಿ ಸಿಎಂ ವಿರುದ್ಧ ಹೇಳಿಕೆ ಕೊಡುತ್ತಾ ಇದ್ದಾರೆ ಎಂದರು.
ಇದನ್ನೂ ಓದಿ: ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪುನೀತ್ ಅಸಮಾಧಾನ
ಬಸವಕಲ್ಯಾಣ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳ ಮನವೊಲಿಸಲಾಗುವುದು. ಕೇಳದಿದ್ದರೆ ಚುನಾವಣೆ ಹೇಗೆ ಮಾಡುವುದು ಗೊತ್ತಿದೆ ಎಂದು ಸೋಮಣ್ಣ ಹೇಳಿದರು