Advertisement

ಯಡಿಯೂರಪ್ಪ-ಈಶ್ವರಪ್ಪ ಜಗಳ ಸರಿಯಲ್ಲ: ಸೋಮಣ್ಣ

07:00 PM Apr 04, 2021 | Team Udayavani |

ಕಲಬುರಗಿ: ಶಿವಮೊಗ್ಗದವರ ಅಂದರೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್‌.ಈಶ್ವರಪ್ಪ ಜಗಳ ಒಂದು ಹೆಜ್ಜೆ ಮುಂದೆ ಹೋಗಿರುವುದು ಸರಿಯಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರಾಗಿರುವ ಈಶ್ವರಪ್ಪ ಅವರು, ಮುಖ್ಯಮಂತ್ರಿ ವಿರು¨ ‌œ ಬಹಿರಂಗವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ವರಿಷ್ಠರು ಎರಡು ದಿನದಲ್ಲಿ ಎಲ್ಲವನ್ನೂ ಸರಿಪಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್‌ವೈ ಹಾಗೂ ಈಶ್ವರಪ್ಪ ಒಂದೇ ಜಿಲ್ಲೆಯವರು. ಒಂದೇ ಕಡೆ ಕುಳಿತು ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಹಿಂದೆಯೂ ಹತ್ತಾರು ಸಲ ಕುಳಿತಿದ್ದಾರೆ. ನಾಲ್ಕು ಗೋಡೆಗಳ ನಡುವೆ ಯಾವ್ಯಾವ ರೀತಿ ನಡೆದುಕೊಂಡಿದ್ದಾರೆ ಎನ್ನುವುದು ಗೊತ್ತಿದೆ ಎಂದು ಬಾಂಬ್‌ ಸಿಡಿಸಿದರು.

ಏ.17ರಂದು ಚುನಾವಣೆ ಮುಗಿದ ನಂತರ ಸಚಿವ ಸಂಪುಟದಲ್ಲಿ ಎಲ್ಲದರ ಕುರಿತು ಚರ್ಚಿಸಲಾಗುವುದು. ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಅಂದರೆ ಬಹಿರಂಗವಾಗಿ ಚರ್ಚೆ-ಹೇಳಿಕೆ ಬೇಡ. ವಿಜಯಪುರ ಶಾಸಕ ಬಸನಗೌಡ ಪಾಟೀಲರು ಗೌಡರು. ಹೀಗಾಗಿ ಸಿಎಂ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ ಎಂದರು. ಬಸವಕಲ್ಯಾಣ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳ ಮನವೊಲಿಸಲಾಗುವುದು. ಕೇಳದಿದ್ದರೆ ಚುನಾವಣೆ ಹೇಗೆ ಮಾಡೋದು ಎನ್ನುವುದು ಗೊತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next