Advertisement

ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಸಚಿವ ನಾಡಗೌಡ

07:00 AM Aug 02, 2018 | Team Udayavani |

ಬೆಂಗಳೂರು: “ವಾರದ ಐದು ದಿನ ಜೆಡಿಎಸ್‌ ಸಚಿವರೊಬ್ಬರು ಪಕ್ಷದ ಕಚೇರಿಗೆ ತೆರಳಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಬೇಕು’ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆಯಂತೆ ಬುಧವಾರ ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾರೆ. 

Advertisement

ಬುಧವಾರ ಬೆಳಗ್ಗೆ ಜೆಡಿಎಸ್‌ ಕಚೇರಿ ಜೆ.ಪಿ.ಭವನಕ್ಕೆ ಭೇಟಿ ನೀಡಿದ ಅವರು,ಅಲ್ಲಿ ಆಗಮಿಸಿದ್ದ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರಲ್ಲದೆ, ಕುಂದುಕೊರತೆಗಳನ್ನು ಆಲಿಸಿದರು. ಅಲ್ಲದೆ, ಕೆಲವು
ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಭರವಸೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ,
ಕಾರ್ಯಕರ್ತರು ಮಾತ್ರವಲ್ಲದೆ, ಸಾರ್ವಜನಿಕರೂ ಬಂದು ಕುಂದುಕೊರತೆಗಳನ್ನು ಹೇಳಿಕೊಳ್ಳಬಹುದು.ಸಾಧ್ಯವಾದಷ್ಟು ಮಟ್ಟಿಗೆ ಅದಕ್ಕೆ ಪರಿಹಾರ ಒದಗಿಸಲಾಗುವುದು ಎಂದರು. 

ಸಚಿವರಾದವರು ವಿಧಾನಸೌಧದಲ್ಲಿ ಕುಳಿತೇ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ನಮಗೆ ಹೇಳಿಕೊಟ್ಟಿಲ್ಲ. ಜನರ ಮಧ್ಯೆ ಇದ್ದು ಕೆಲಸ ಮಾಡಿ ಎಂದಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next