Advertisement
ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಮತ್ತು ರಾಜ್ಯದಲ್ಲಿನ ಕೋವಿಡ್ ಎರಡನೇ ಅಲೆಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಸಚಿವರು ವೀಕ್ಷಿಸಿದರು. ಚೆಕ್‌ಪೋಸ್ಟ್‌ನಲ್ಲಿ ಬಹು ಹೊತ್ತು ನಿಂತು ವಾಹನಗಳ ಸಂಚಾರ ಹಾಗೂ ವಹಿಸಲಾಗಿರುವ ತಪಾಸಣಾ ಕಾರ್ಯವನ್ನು ಸಚಿವರುಪರಿಶೀಲಿಸಿದರು. ಚೆಕ್‌ಪೋಸ್ಟ್ ನಲ್ಲಿ ವಾಹನಗಳುಮತ್ತು ಪ್ರಯಾಣಿಕರ ವಿವರವನ್ನು ದಾಖಲಿಸುತ್ತಿರುವ ವಹಿಯನ್ನು ವೀಕ್ಷಿಸಿದರು.
Related Articles
Advertisement
32 ಸಕ್ರಿಯ ಪ್ರಕರಣ: ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಸುರೇಶ್‌ಕುಮಾರ್, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಒಟ್ಟು 32 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಈಗಾಗಲೇಹಿರಿಯ ನಾಗರಿಕರು, ವಿವಿಧ ಕಾಯಿಲೆಗಳಿಂದಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ರೋಗ ನಿರೋಧಕ ಶಕ್ತಿ ಒದಗಿಸುವ ಲಸಿಕೆ ನೀಡಲಾಗುತ್ತಿದೆ. ಇದುವರೆಗೆ 35,558 ಜನರಿಗೆ ಲಸಿಕೆಹಾಕಲಾಗಿದ್ದು, ಚಾಮರಾಜನಗರ ಜಿಲ್ಲೆ ಲಸಿಕಾ ಪ್ರಗತಿಯಲ್ಲಿ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದರು.
ಕೇಂದ್ರ ಸರ್ಕಾರದ ಸೂಚನೆಯಂತೆ ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್‌ಪರೀಕ್ಷೆಯನ್ನು ಪ್ರತಿ ದಿನ 1,200 ಜನರಿಗೆಮಾಡಲಾಗುತ್ತಿದೆ. ಟೆಸ್ಟಿಂಗ್, ಟ್ರೇಸಿಂಗ್ ಹಾಗೂಟ್ರೀಟ್‌ಮೆಂಟ್ ಅನ್ನು ಸಮರ್ಪಕವಾಗಿ ಮಾಡುವಮೂಲಕ ಕೋವಿಡ್ ನಿಯಂತ್ರಣದಲ್ಲಿಡಲು ಸಾಧ್ಯವಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಕ್ರಮವಹಿಸಲುಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಹೆಚ್ಚಿನ ಜಾಗೃತಿ ಮೂಡಿಸಿ: ಕೋವಿಡ್ ವಿರುದ್ಧದ ಹೋರಾಟದಲ್ಲಿ ಜನರ ಸಹಕಾರ ಮುಖ್ಯವಾಗಿದೆ. ಜನರಲ್ಲಿ ಮುನ್ನೆಚ್ಚರಿಕೆ ಇರಬೇಕು, ಮಾಸ್ಕ್ ಧರಿಸದಿದ್ದಲ್ಲಿ ದಂಡ ಹಾಕಲು ಸೂಚಿಸಲಾಗಿದೆ. ಆದರೆ, ದಂಡ ವಿಧಿಸುವುದು ಮುಖ್ಯ ಉದ್ದೇಶವಲ್ಲ, ಮಾಸ್ಕ್ ಧರಿಸಬೇಕೆಂಬುವುದು ಮಾತ್ರ ಸದುದ್ದೇಶವಾಗಿದೆ. ಹೋಟೆಲ್, ಅಂಗಡಿ ಮುಂಗಟ್ಟು, ಪೆಟ್ರೋಲ್ ಬಂಕ್, ಲಾರಿ ಮಾಲಿಕರ ಸಭೆ ಕರೆದು ಮಾಸ್ಕ್ ಧರಿಸುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ತಿಳಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಗಡಿ ಚೆಕ್ ಪೋಸ್ಟ್‌ನಲ್ಲಿ ಪ್ರಯಾಣಿಕರು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಿ ಪಡೆದಿರುವ ನೆಗೆಟಿವ್ ರಿಪೋರ್ಟ್ ಅನ್ನು ಹಾಜರುಪಡಿಸುವುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದೂ ತಿಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಜಿಪಂ ಸಿಇಒ ಹರ್ಷಲ್ ಬೋಯರ್, ಉಪವಿಭಾಗಾಧಿಕಾರಿ ಗಿರೀಶ್‌ದಿಲೀಪ್ ಬಡೋಲೆ,ಡಿಎಚ್‌ಒ ಡಾ.ಎಂ.ಸಿ. ರವಿ, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ನಾಗರಾಜು, ಜಿಲ್ಲಾ ಆಸ್ಪತ್ರೆಯ ಕೋವಿಡ್‌ಅಧಿಕಾರಿ ಡಾ.ಮಹೇಶ್, ಆರ್‌ಸಿಎಚ್ ಅಧಿಕಾರಿಡಾ.ವಿಶ್ವೇಶ್ವರಯ್ಯ, ಹೆಚ್ಚುವರಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್, ತಹಶೀಲ್ದಾರ್‌ರವಿಶಂಕರ್, ಅರಣ್ಯ, ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.