ಚಾಮರಾಜನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಸಿ.ಸಿ. ಪಾಟೀಲ ಜಿಲ್ಲೆಯ ವಿವಿಧ ಗಣಿ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದರು.
ತಾಲೂಕಿನ ಕೆಂಪನಪುರ, ಹುಲ್ಲೇಪುರ,ರೇಚಂಬಳ್ಳಿ, ನಂಜರಾಜಪುರ, ಶಿವಪುರ,ಯಡಪುರ, ಮಲ್ಲಯ್ಯನಪುರ, ಯಳಂ ದೂರು ತಾಲೂಕಿನ ಯರಗಂಬಳ್ಳಿವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕಪ್ಪು ಅಲಂಕಾರಿಕ ಶಿಲೆಯ ಪಟ್ಟಾ ಪ್ರದೇಶಗಳಿಗೆ ಭೇಟಿ ನೀಡಿ, ಗಣಿ ಪ್ರದೇಶಗಳಲ್ಲಿ ತೆಗೆದಿರುವ ಕಲ್ಲಿನ ಪ್ರಮಾಣ ಮತ್ತು ಪ್ರಮಾಣಗಳ ಉಲ್ಲಂಘನೆ ಬಗ್ಗೆಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಇಲಾಖೆಯ ಹಿರಿಯಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾಸಭೆ ನಡೆಸಿದ ಸಚಿವರು ಜಿಲ್ಲೆಯಲ್ಲಿಕಾರ್ಯನಿರ್ವಹಿಸುತ್ತಿರುವ ಕಪ್ಪು ಅಲಂಕಾರಿಕ ಶಿಲಾ ಗಣಿಗಾರಿಕೆ ಬಗ್ಗೆ ಮಾಹಿತಿ ಪಡೆದರು. ಮಲ್ಲಯ್ಯನಪುರದ 31 ಎಕರೆ ಪ್ರದೇಶದಲ್ಲಿ ನೈಸರ್ಗಿಕ ಭೂ ವಿಜ್ಞಾನ ಮ್ಯೂಸಿಯಂ ಸ್ಥಾಪನೆಗೆ ಅಗತ್ಯವಿರುವ ಭೂ ಮಂಜೂರಾತಿಗೆ ಕ್ರಮ ತೆಗೆದು ಕೊಳ್ಳಬೇಕು ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸ್ವಂತ ಕಚೇರಿಯ ಕಟ್ಟಡ ಮತ್ತುಇಲಾಖೆಯಿಂದ ವಶಪಡಿಸಿಕೊಳ್ಳಲಾಗುವ ಖನಿಜ ದಾಸ್ತಾನಿಗೆ ಸ್ಟಾಕ್ ಯಾರ್ಡ್ ನಿರ್ಮಾಣ ಮತ್ತು ವೇಬ್ರಿಡ್ಜ್ ಸ್ಥಾಪನೆಗೆ ಉದ್ದೇಶಿಸಿ ಗುರುತಿಸಲಾಗಿರುವ2 ಎಕರೆ ಪ್ರದೇಶ ಸಂಬಂಧ ಮಂಜೂರಾತಿ ಪ್ರಕ್ರಿಯೆಯು ತ್ವರಿತವಾಗಿ ನಡೆಸಬೇಕು ಎಂದರು.