ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದವರ ಮನವೊಲಿಸುವಲ್ಲಿ ಸಚಿವ ಜಮೀರ್ ಅಹಮದ್ ಯಶಸ್ವಿಯಾಗಿದ್ದಾರೆ.
ಕುಂದಗೋಳ ಉಸ್ತುವಾರಿ ವಹಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರ ಮಾತಿಗೆ ಬಗ್ಗದೆ ಬಂಡಾಯಗಾರರಾಗಿ ಕಣದಲ್ಲಿ ಉಳಿದಿದ್ದ ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಸೇರಿ ಬಂಡಾಯ ಅಭ್ಯರ್ಥಿಗಳ ಮನವೊಲಿಸುವಂತೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ಜಮೀರ್ ಆಹಮದ್ ಗೆ ಸೂಚನೆ ನೀಡಿದ್ದರು ಎಂದು ಹೇಳಲಾಗಿದೆ. ಬುಧವಾರ ರಾತ್ರಿ ಸಂಧಾನ ಸಭೆ ನಡೆಸಿದ ಜಮೀರ್ ಅಹಮದ್, ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯುವಂತೆ ಮಾಡಿ, ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ.
ಹೀಗಾಗಿ, ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವ ಜಮೀರ್ ಅಹಮದ್ ಅವರಿಗೆ ಬಂಡಾಯ ಶಮನದ ಹೊಣೆಗಾರಿಕೆ ವಹಿಸಿದ್ದರು.
Advertisement