Advertisement

ಇಂದಿರಾ ಕ್ಯಾಂಟೀನ್‌ಗೆ ಸಚಿವ ಜಮೀರ್‌ ಚಾಲನೆ

11:33 AM Jan 27, 2019 | Team Udayavani |

ಹಾವೇರಿ: ಶ್ರಮಿಕರಿಗೆ, ಬಡವರಿಗೆ ಕಡಿಮೆ ದರದಲ್ಲಿ ಉಪಹಾರ, ಊಟ ನೀಡುವ ರಾಜ್ಯ ಸರ್ಕಾರ ಪ್ರಾಯೋಜಿತ ಇಂದಿರಾ ಕ್ಯಾಂಟೀನ್‌ಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದಖಾನ್‌ ಚಾಲನೆ ನೀಡಿದರು.

Advertisement

ಸ್ವತಃ ಹಣ ನೀಡಿ ಇಡ್ಲಿ-ವಡೆ, ಪೊಂಗಲ್‌, ಚಟ್ನಿ ಖರೀದಿಸಿ ಸವಿದ ಸಚಿವರು, ಜಿಲ್ಲೆಯಲ್ಲಿ ಒಟ್ಟು ಎಂಟು ಇಂದಿರಾ ಕ್ಯಾಂಟೀನ್‌ಗಳು ಮಂಜೂರಾಗಿದ್ದು, ಮೊದಲನೆದಾಗಿ ಹಾವೇರಿ ಇಂದಿರಾ ಕ್ಯಾಂಟಿನ್‌ ಇಂದು ಕಾರ್ಯಾರಂಭಗೊಳಿಸಲಾಗಿದೆ. ಶೀಘ್ರದಲ್ಲೇ ರಾಣಿಬೆನ್ನೂರಲ್ಲಿ ಕಾರ್ಯಾರಂಭಕ್ಕೆ ಸಿದ್ಧತೆ ನಡೆಸಲಾಗಿದೆ. ರಾಣಿಬೆನ್ನೂರಿನಲ್ಲಿ ಎರಡು, ಉಳಿದ ತಾಲೂಕಿನಲ್ಲಿ ತಲಾ ಒಂದರಂತೆ ಎಂಟು ಇಂದಿರಾ ಕ್ಯಾಂಟೀನ್‌ಗಳನ್ನು ಹಂತ ಹಂತವಾಗಿ ಕಾರ್ಯಾರಂಭಗೊಳಿಸಲಾಗುವುದು ಎಂದರು.

ಜಿಲ್ಲೆಯ ಇಂದಿರಾ ಕ್ಯಾಂಟೀನ್‌ ನಿರ್ವಹಣೆಯ ಹೊಣೆ ಹೊತ್ತಿರುವ ಬೆಂಗಳೂರು ಮೂಲದ ನೌ ಪ್ರಯಾಸ್‌ ಕಂಪನಿಯ ಯೋಜನಾ ನಿರ್ದೇಶಕ ಶೋಯಬ್‌ ಅಹ್ಮದ್‌, ತಮ್ಮ ಕಂಪನಿ ವತಿಯಿಂದ ಚಿಕ್ಕಬಳ್ಳಾಪುರ ಮತ್ತು ಹಾವೇರಿ ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲಾಗಿದೆ. ಬೆಳಗ್ಗೆ 500 ಜನರಿಗೆ ತಲಾ ಐದು ರೂ. ದರದಲ್ಲಿ ಉಪಹಾರ ಮಧ್ಯಾಹ್ನ ಹಾಗೂ ಸಂಜೆ 500 ಜನರಿಗೆ ಹತ್ತು ರೂ. ದರದಲ್ಲಿ ಊಟ ಪೂರೈಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ, ಸಂಸದ ಶಿವಕುಮಾರ ಉದಾಸಿ, ಶಾಸಕ ನೆಹರು ಓಲೇಕಾರ, ಜಿಪಂ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ಜಿಲ್ಲಾಧಿಕಾರಿ ಡಾ| ಎಂ.ವಿ.ವೆಂಕಟೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ, ಮಾಜಿ ಸಚಿವ ರುದ್ರಪ್ಪ ಲಮಾಣಿ ಇತರರು ಉಪಹಾರ ಸವಿದರು.

Advertisement

Udayavani is now on Telegram. Click here to join our channel and stay updated with the latest news.

Next