Advertisement

ವರಿಷ್ಠರ ಒಪ್ಪಿಗೆ ನಿರೀಕ್ಷೆಯಲ್ಲಿ ಸಚಿವಾಕಾಂಕ್ಷಿಗಳು

12:07 AM Jan 28, 2020 | Team Udayavani |

ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರಿಗೆ ಸಂಭಾವ್ಯರ ಪಟ್ಟಿ ರವಾನಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುವ ಸಂಭವವಿದೆ. ಈ ವೇಳೆ ಒಪ್ಪಿಗೆ ದೊರೆತರೆ ಶುಕ್ರವಾರ ಸಂಪುಟ ವಿಸ್ತರಣೆಯಾಗಲಿದೆ. ಒಪ್ಪಿಗೆ ಸಿಗದಿದ್ದರೆ ಫೆ. 10ರ ಬಳಿಕವೇ ಸಂಪುಟ ವಿಸ್ತರಣೆಯಾಗಬಹುದು.

Advertisement

ಇತ್ತೀಚೆಗೆ ಭೇಟಿಯಾಗಿದ್ದ ಬಿ.ಎಲ್‌.ಸಂತೋಷ್‌ ಅವರಿಗೆ ಯಡಿಯೂರಪ್ಪ ಅವರು ಸಂಭವನೀಯ ಸಚಿವರ ಪಟ್ಟಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ವರಿಷ್ಠರು ಅನುಮೋದನೆ ನೀಡಬೇಕಿದೆ. ಆ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ವರಿಷ್ಠರತ್ತ ನೆಟ್ಟಿದೆ. ಬುಧ ವಾರದವರೆಗೆ ಯಡಿಯೂರಪ್ಪ ಅವರ ಕಾರ್ಯ ಕ್ರಮಗಳು ನಿಗದಿಯಾಗಿವೆ. ಸದ್ಯದ ವೇಳಾಪಟ್ಟಿ ಪ್ರಕಾರ ಗುರು ವಾರ ಬೆಳಗ್ಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೆಲಿಕಾಪ್ಟರ್‌ನಲ್ಲಿ ಹಿಂದಿರುಗಲಿದ್ದಾರೆ.

ಬಳಿಕ ದೆಹಲಿಗೆ ತೆರಳಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಅಭಿನಂದಿಸುವ ಚಿಂತನೆಯಲ್ಲಿದ್ದಾರೆ. ಮೂಲ ಬಿಜೆಪಿ ಹಿರಿಯ ಶಾಸಕರು ಸಹ ಸಚಿವ ಸ್ಥಾನಕ್ಕೆ ತೀವ್ರ ಒತ್ತಡ ಹೇರುತ್ತಿರುವುದರಿಂದ ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದಂತಾಗಿದ್ದು, ವರಿಷ್ಠ ರೊಂದಿಗೆ ಚರ್ಚಿಸಿಯೇ ಅಂತಿಮಗೊಳಿಸಲಿದ್ದಾರೆ. ಹಾಗಾಗಿ ಸಚಿವಾಕಾಂಕ್ಷಿಗಳು ವರಿಷ್ಠರ ನಡೆಯತ್ತ ದೃಷ್ಟಿ ನೆಟ್ಟಿದ್ದಾರೆ. ಶ್ರೀರಾಮುಲು- ಸ್ವಾಮೀಜಿ ಭೇಟಿ: ಸಚಿವ ಬಿ.ಶ್ರೀರಾಮುಲು ಅವರನ್ನು ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸೋಮವಾರ ಭೇಟಿಯಾಗಿ ಚರ್ಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next