Advertisement

ಬಿಎಸ್ ವೈ ಸಂಪುಟ ವಿಸ್ತರಣೆಗೆ ಬಿಜೆಪಿ ಪ್ರಮುಖರೇ ಗೈರು

10:12 AM Feb 07, 2020 | keerthan |

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಂಪುಟಕ್ಕೆ ನೂತನ ಸಚಿವರುಗಳಾಗಿ 10 ಜನ ನೂತನ ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಬಿಜೆಪಿಯ ಕೆಲ ಸಚಿವರು, ಶಾಸಕರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

Advertisement

ಡಿಸಿಎಂ ಸ್ಥಾನದ ಆಕಾಂಕ್ಷಿಗಳಾದ ಸಚಿವರಾದ ಶ್ರೀರಾಮುಲು, ಕೆ ಎಸ್ ಈಶ್ವರಪ್ಪ ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಸಚಿವ ಸ್ಥಾನದ ಆಕಾಂಕ್ಷಿಗಳಾದ ಉಮೇಶ್ ಕತ್ತಿ, ಸಿ.ಪಿ ಯೋಗೇಶ್ವರ್, ಎಂ ಟಿ ಬಿ ನಾಗರಾಜ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.

ಉಪಚುನಾವಣೆಯಲ್ಲಿ ಸೋಲನುಭವಿಸಿದ್ದ ಎಚ್.ವಿಶ್ವನಾಥ್ ಮತ್ತು ಮಾಜಿ ಸಚಿವ ಆರ್. ಶಂಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೂತನ ಸಚಿವರಿಗೆ ಶುಭ ಹಾರೈಸಿದರು.

ಬಿಎಸ್ ವೈ ಕಾಲಿಗೆರಗಿದ ಸಚಿವರು

Advertisement

ಪ್ರಮಾಣ ವಚನ ಸ್ವೀಕರಿಸುತ್ತಿದ ನೂತನ ಸಚಿವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾಲಿಗೆರಗಿ ನಮಸ್ಕರಿಸಿದರು. ರಮೇಶ್ ಜಾರಕಿಹೊಳಿ ಹೊರತು ಪಡಿಸಿ ಉಳೆದಲ್ಲಾ ಒಂಬತ್ತು ಮಂದಿ ಬಿಎಸ್ ವೈ ಕಾಲಿಗೆರಗಿದರು.

ಎಂಟು ಮಂದಿಗೆ ಮೊದಲ ಸಲ

ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ವಿಜಯನಗರ ಶಾಸಕ ಆನಂದ್ ಸಿಂಗ್ ಹೊರತು ಪಡಿಸಿ ಉಳಿದ ಎಂಟು ಮಂದಿಗೆ ಇದು ಮೊದಲ ಸಚಿವ ಸ್ಥಾನ. ಜಾರಕಿಹೊಳಿ ಮತ್ತು ಸಿಂಗ್ ಈ ಹಿಂದೆ ಸಚಿವ ಸ್ಥಾನ ನಿಭಾಯಿಸಿದ್ದ ಅನುಭವಿಗಳು.

ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್‌ ಸಿಂಗ್‌, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ, ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್‌, ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ಬಿಎಸ್ ವೈ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next