Advertisement

ಆಪ್ತರಿಗೆ ಟಿಕೆಟ್‌ ಕೊಡಿಸಲು ಸಚಿವರ ಪೈಪೋಟಿ

12:31 PM Apr 02, 2018 | Team Udayavani |

ಬೆಂಗಳೂರು: ಬಸವನಗುಡಿ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್‌ ಕೊಡಿಸಬೇಕೆಂದು ಸಚಿವರ ನಡುವೆ ಪೈಪೋಟಿ ನಡೆದಿದೆ.

Advertisement

ಮಾಜಿ ಶಾಸಕ ಚಂದ್ರಶೇಖರ್‌ ಪರವಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌, ಎಚ್‌.ಎಂ. ರೇವಣ್ಣ, ಕೃಷ್ಣಬೈರೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ಮಾಜಿ ಸಚಿವ ಬಿ.ಕೆ. ಚಂದ್ರಶೇಖರ್‌ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ 22 ಸಾವಿರ ಮತಗಳ ಅಂತರದಿಂದ ಸೋತಿರುವುದರಿಂದ  ಈ ಬಾರಿ ಅವರಿಗೆ ಟಿಕೆಟ್‌ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ದಲಿತ ಸಮುದಾಯದವರಾಗಿದ್ದರೂ ಬಸವನಗುಡಿ ಕ್ಷೇತ್ರದಲ್ಲಿ ಶಾಸಕರಾಗಿ, ಮೇಯರ್‌ ಆಗಿ ಉತ್ತಮ ಕೆಲಸ ಮಾಡಿದ್ದು,

ಚಂದ್ರಶೇಖರ್‌ಗೆ ಟಿಕೆಟ್‌ ನೀಡಿದರೆ ಕಾಂಗ್ರೆಸ್‌ ಗೆಲುವು ಖಚಿತ ಎಂದು ನಾಯಕರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಇಂಧನ ಸಚಿವ ಡಿ.ಕೆ. ಶಿವಕುಮಾರ್‌, ಇತ್ತೀಚೆಗೆ ಬಿಜೆಪಿಯಿಂದ ವಲಸೆ ಬಂದಿರುವ ಬೋರೆಗೌಡರಿಗೆ ಟಿಕೆಟ್‌ ಕೊಡಿಸಲು ಪ್ರಯತ್ನ ನಡೆಸಿದ್ದು, ಅವರ ಪರವಾಗಿ ಲಾಬಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next