ಹಾನಗಲ್ಲ: ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, ಅದು ಭ್ರಷ್ಟ್ರ ಜನತಾ ಪಾರ್ಟಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಗಂಭೀರವಾಗಿ ಆರೋಪಿಸಿದರು. ತಾಲೂಕಿನ ಹೊಂಕಣ ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ತೆರಿಗೆ ಹಣದಲ್ಲಿ ಲೂಟಿ ಮಾಡಿದೆ. ಆಡಳಿತ ಪಕ್ಷದ ಸಚಿವರುಗಳ ನಡುವೆಯೇ ಹಣ ದೋಚಲು ಕಿತ್ತಾಟ ನಡೆದಿದೆ. ರಾಜ್ಯ ಸರ್ಕಾರ ಕೊರೊನಾ ಉಪಕರಣಗಳ ಖರೀದಿಯಲ್ಲಿ 2 ಸಾವಿರ ಕೋಟಿ ರೂ. ಭ್ರಷ್ಟ್ರಾಚಾರ ನಡೆಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ, ವಿಶ್ವಾಸವಿಲ್ಲ ಎಂದು ದೂರಿದರು.
ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್ ಡೀಸೆಲ್, ಅಡುಗೆ ಅನಿಲ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರು ತತ್ತರಿಸುವಂತೆ ಮಾಡಿದೆ. ಕೋವಿಡ್ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಅಮಾನವೀಯವಾಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರದ ವಿರುದ್ಧ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್‌ಗೆ ತ್ಯಾಗ-ಬಲಿದಾನ: ಕಾಂಗ್ರೆಸ್ ಪಕ್ಷ ನಿನ್ನೆ ಇವತ್ತು ಹುಟ್ಟಿದ ಪಕ್ಷವಲ್ಲ. ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ. ಮಾಜಿ ಪ್ರಧಾನಮಂತ್ರಿಗಳಾದ ದಿ| ಇಂದಿರಾಗಾಂಧಿ ಹಾಗೂ ರಾಜೀವ್ ಗಾಂ ಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ರಾಜೀವ್ ಗಾಂ ಧಿಯವರ ಪ್ರತಿಬಿಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯವರು ಇಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಬಿಜೆಪಿಯವರು ಇಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದರು. ಕಾಂಗ್ರೆಸ್ ಜನರ ಪರವಾಗಿ ನಿರಂತರ ಕೆಲಸ ಮಾಡುತ್ತಾ ಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ವತಿಯಿಂದ ಜನರಿಗೆ ನೆರವಾಗಿದ್ದೇವೆ. ಕಾಂಗ್ರೆಸ್ ಅಧಿ ಕಾರದಲ್ಲಿ ಇಲ್ಲದಿದ್ದರೂ ಜನಪರವಾಗಿದೆ. ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಡುವ ಮೂಲಕ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರನ್ನು ಅತೀ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಸಚಿವರಾದ ಎಚ್. ಕೆ. ಪಾಟೀಲ, ಮನೋಹರ ತಹಶೀಲ್ದಾರ್, ಕೃಷ್ಣಭೈರೇಗೌಡ, ಶಾಸಕ ಶರತ್ ಬಚ್ಚೇಗೌಡ, ಮಾಜಿ ಶಾಸಕ ಮಧು ಬಂಗಾರಪ್ಪ, ಮಾಜಿ ಶಾಸಕ ಸಂಪಂಗಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಭೀಮಣ್ಣ ನಾಯಕ್ ಇತರರು ಇದ್ದರು.
ಕೊರೊನಾ ಸಂದರ್ಭದಲ್ಲಿ ನಿಮ್ಮ ಮನೆ ಮಗ ಶ್ರೀನಿವಾಸ ಮಾನೆ ಅವರು ಯಾವುದೇ ಅ ಧಿಕಾರದ ಆಸೆಯಿಲ್ಲದೆ ಜನರಿಗೆ ನೆರವಾಗಿದ್ದಾರೆ. ಅ ಧಿಕಾರ ಶಾಶ್ವತವಲ್ಲ. ಜನರಿಗೆ ಮಾಡಿದ ಸೇವೆಯಿಂದಾಗಿ ಮಾನೆ ಅವರು ಕ್ಷೇತ್ರದಲ್ಲಿ ಅಪದಾºಂಧವ ಹೆಸರಿನಿಂದ ಗುರುತಿಸಿಕೊಂಡಿದ್ದಾರೆ. ಶ್ರೀನಿವಾಸ್ ಮಾನೆ ಅವರು ಅತೀ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿ ಸಲಿದ್ದಾರೆ ಎಂಬ ವಿಶ್ವಾಸವಿದೆ.
ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ