Advertisement

ಮಳೆ ಹಾನಿ ಪ್ರದೇಶಗಳಿಗೆ ಸಚಿವರು ತೆರಳಿದ್ದಾರೆ: ಆರಗ ಜ್ಞಾನೇಂದ್ರ

12:27 AM Jul 12, 2022 | Team Udayavani |

ಬೆಂಗಳೂರು: ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ ಎಂಬ ಕಾಂಗ್ರೆಸ್‌ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಪ್ರವಾಗಗ್ರಸ್ತ ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ನಾನು ಕೂಡ ಆಗುಂಬೆ ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತ ಆದ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ದುರಸ್ತಿ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಕೊಡಗಿನಲ್ಲಿ ನಮ್ಮ ಶಾಸಕರು ದಿನದ 24 ಗಂಟೆಯೂ ಜನರ ಜತೆಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಪಠ್ಯ ಪುಸ್ತಕ ಗೊಂದಲ ಬಗೆ ಹರಿಸುವುದರಲ್ಲಿ ತೊಡಗಿದ್ದಾರೆ. ಉಳಿದಂತೆ ಎಲ್ಲರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next