ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಂದು ಆವರಣದಲ್ಲಿ ಒಂದೇ ಮಾಧ್ಯಮದ 2ಕ್ಕಿಂತ ಹೆಚ್ಚಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ನಡೆಯುತ್ತಿದ್ದರೆ, ಅಂತಹ ಶಾಲೆಗಳನ್ನು ಗುರುತಿಸಿ ಒಂದೇ ಶಾಲೆಯನ್ನಾಗಿ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ಟಿಪ್ಪಣಿ ಹೊರಡಿಸಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಉಪ ನಿರ್ದೇಶಕರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಒಂದೇ ಆವರಣದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ಶಾಲೆಗಳು ನಡೆಯುತ್ತಿರುವುದನ್ನು ಗಮನಿಸಲಾಗಿದೆ. ಈ ರೀತಿಯ ಶಾಲೆಯಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಪೂರಕ ವಾತಾವರಣ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಈ ಶಾಲೆಗಳಿಗೆ ಇರುವ ಪ್ರತ್ಯೇಕ ಯು-ಡೈಸ್ ಕೋಡ್‌ಗಳಿಗೆ ಬದಲಾಗಿ ಒಂದೇ ಯು-ಡೈಸ್ ಕೋಡ್‌ಗಳನ್ನು ನೀಡಲು ಇಲಾಖೆಯು ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಬೇಕು. ಕೈಗೊಂಡ ವರದಿಯನ್ನು ಕಡತದ ಮೂಲಕ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.