Advertisement

“ಸೋತವರಿಗೆ ಸಚಿವ ಸ್ಥಾನ ಹೈಕಮಾಂಡ್‌ಗೆ ಬಿಟ್ಟಿದ್ದು’

11:08 PM Dec 07, 2019 | Team Udayavani |

ಬೆಂಗಳೂರು: ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.

Advertisement

ರಾಜೀನಾಮೆ ನೀಡಿದ ಶಾಸಕರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಉಪ ಚುನಾವಣೆಯಲ್ಲಿ ಗೆದ್ದವರು ಸಚಿವರಾಗುವುದು ನಿಶ್ಚಿತ. ಸೋತವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ತಿಳಿಸಿದರು. ಸ್ಥಿರ ಹಾಗೂ ಅಭಿವೃದ್ಧಿ ಪರ ಸರ್ಕಾರಕ್ಕಾಗಿ ರಾಜ್ಯದ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಉಪಚುನಾವಣೆ ಫ‌ಲಿತಾಂಶದಲ್ಲಿ ನಮಗೆ ಹೆಚ್ಚಿನ ಸ್ಥಾನ ಬರಲಿದೆ ಎಂಬ ವಿಶ್ವಾಸವೂ ಇದೆ.

15 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಕನಿಷ್ಠ 12 ಕ್ಷೇತ್ರವಾದರೂ ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ ಎಂದರು. ವಿರೋಧ ಪಕ್ಷದವರು ಏನೇ ಅಪಪ್ರಚಾರ ಮಾಡಿದರೂ ಮತದಾರರು ಬಿಜೆಪಿಗೆ ಒಲವು ತೋರಿಸಿದ್ದಾರೆ. ಸುಸ್ಥಿರ ಹಾಗೂ ಅಭಿವೃದ್ಧಿ ಪರ ಸರ್ಕಾರವನ್ನು ಜನರು ಬಯಸಿದ್ದಾರೆ. ಉಪಚುನಾವಣೆ ಫ‌ಲಿತಾಂಶ ನಮಗೆ ಇನ್ನಷ್ಟು ಶಕ್ತಿ ಹಾಗೂ ಧೈರ್ಯ ತುಂಬಲಿದೆ. ಮುಂದಿನ ಮೂರೂವರೆ ವರ್ಷಗಳ ಅವಧಿಗೆ ಬಿಜೆಪಿ ಸರ್ಕಾರ ಅಧಿಕಾರ ನಡೆಸಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next