Advertisement

ಸಚಿವರ ಭರವಸೆ: 108 ಆರೋಗ್ಯ ಕವಚ ನೌಕರರ ಮುಷ್ಕರ ಸ್ಥಗಿತ

08:31 PM Apr 02, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ 108 ಆರೋಗ್ಯ ಕವಚದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವೇತನ ಶೀಘ್ರ ಪಾವತಿಗೆ ಅಗತ್ಯವಿರುವ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದರಿಂದ ಮುಷ್ಕರದ ನಿರ್ಧಾರವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108)ನೌಕರರ ಸಂಘ ತಿಳಿಸಿದೆ.

Advertisement

ಮಂಗಳವಾರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘ ಪದಾಧಿಕಾರಿಗಳು ಭಾಗವಹಿಸಿದರು. ಈ ವೇಳೆ ಸಿಬ್ಬಂದಿ ವೇತನ ಪಾವತಿಯಾಗದಿರುವ ಕುರಿತು ಸಚಿವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸಚಿವರು ವೇತನ ಪಾವತಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ಬಗ್ಗೆ ಹರಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಮುಷ್ಕರವನ್ನು ಒಂದು ವಾರ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next