Advertisement

ಆದಿಚುಂಚನಗಿರಿ ಶಾಖಾ ಮಠಕ್ಕೆ ಸಚಿವರ ಭೇಟಿ

08:58 AM May 18, 2020 | Lakshmi GovindaRaj |

ಮೈಸೂರು: ನಗರದ ಆದಿಚುಂಚನಗಿರಿ ಮೈಸೂರು ಶಾಖಾ ಮಠಕ್ಕೆ ಸಚಿವ ಎಸ್‌.ಟಿ. ಸೋಮಶೇಖರ್‌ ಭೇಟಿ ನೀಡಿ, ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಮಠದ ಕಾರ್ಯದರ್ಶಿಗಳಾದ ಸೋಮೇಶ್ವರನಾಥ ಸ್ವಾಮೀಜಿ ಆಶೀರ್ವಾದ ಪಡೆದರು.

Advertisement

ಮೈಸೂರು ಜಿಲ್ಲೆ ಕೊರೊನಾ ಮುಕ್ತವಾಗುವತ್ತ ಹೆಜ್ಜೆ ಇಟ್ಟಿದ್ದು, ಸಚಿವರು, ಡೀಸಿ, ಜಿಲ್ಲಾಡಾಳಿತ ಮತ್ತು ಜನಪ್ರತಿನಿಧಿಗಳ ಶ್ರಮ ಅಧಿಕವಾಗಿದೆ. ಈ ವೇಳೆ ಎಲ್ಲರ ಕಾರ್ಯವೈಖರಿ  ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ವಾಮೀಜಿ, ಸ್ವತ್ಛತೆಗೆ ಆದ್ಯತೆ, ಜಾಗೃತಿ ಉಂಟು ಮಾಡಬೇಕು ಎಂದು ಸಲಹೆ ನೀಡಿದರು.

ಹಣ ದುರುಪಯೋಗದ ವಿರುದ್ಧ ಕ್ರಮ: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಹಕಾರ ಸಂಘಗಳಲ್ಲಿ  ಅಕ್ರಮ ಇದ್ದರೆ ಸಹಿಸುವುದಿಲ್ಲ. ಯಾವುದಾದರೂ ಸಂಘ ಸಂಸ್ಥೆಗಳಲ್ಲಿ ದುಡ್ಡು ಕಟ್ಟಿಸಿಕೊಂಡು ಜನರಿಗೆ ಮೋಸ ಮಾಡಿದ್ದರೆ ಕ್ರಮ ಕೈಗೊಳ್ಳಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಎಪಿಎಂಸಿಗೆ  ಯಾವುದೇ  ತೊಂದರೆಯಾಗದು ಎಂದು ಹೇಳಿದರು.

ಎಸ್ಸಿ-ಎಸ್ಟಿಗಳಿಗೆ ಕೃಷಿ ಸಾಲ ಸರಿಯಾದ ಪ್ರಮಾಣದಲ್ಲಿ ಲಭಿಸುತ್ತಿಲ್ಲ. ಈ  ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಣೆಯಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ  ಸೂಚಿಸಿದ್ದೇನೆ ಎಂದರು. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next