Advertisement

ಸಚಿವರಿಂದ ಮಾರುಕಟ್ಟೆ ಭೇಟಿ: ತರಕಾರಿ ಖರೀದಿ ಹಾಗೂ ಮಾರಾಟಕ್ಕೆ ಸುಗಮ ವ್ಯವಸ್ಥೆ

12:19 PM Apr 03, 2020 | keerthan |

ಬೆಂಗಳೂರು: ಯಡಿಯೂರಪ್ಪ ಸಂಪುಟದ ಐವರು ಸಚಿವರು ಶುಕ್ರವಾರ  ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಲಾಕ್ ಡೌನ್ ಹಿನ್ನೆಲೆಯಲ್ಲಿ ತರಕಾರಿ, ಹಣ್ಣುಗಳ ಸಾಗಾಟಕ್ಕೆ ಅಡಚಣೆ ಆಗದಂತೆ ವ್ಯವಸ್ಥೆ ‌ಮಾಡಿದರು.

Advertisement

ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ತೋಟಗಾರಿಕಾ ಸಚಿವ ನಾರಾಯಣ ಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್,ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದರು.

ಸಾಗಾಟಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ತರಕಾರಿ ಬರಲಾರಂಬಿಸಿತು. ಈ ಹಿನ್ನೆಲೆಯಲ್ಲಿ ರೈತರು, ವ್ಯಾಪಾರಸ್ಥರು ಸಚಿವರ ಬಳಿ ಸಂತಸ ವ್ಯಕ್ತಪಡಿಸಿದರು.

ಮೊದಲು ಬ್ಯಾಟರಾಯನ ಪುರ ಮಾರುಕಟ್ಟೆಗೆ ಬೆಳಿಗ್ಗೆ 6 ಗಂಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು ಮಾರುಕಟ್ಟೆಯಲ್ಲಿ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಹಾಗೂ ಕಡ್ಡಾಯ ಮಾಸ್ಕ್ ಧರಿಸುವಂತೆ ಸಚಿವರು ಸೂಚಿಸಿದರು.

ಬಳಿಕ ದಾಸನಪುರ ಉಪ ಮಾರುಕಟ್ಟೆಗೆ ಭೇಟಿ ನೀಡಿ ತರಕಾರಿ ಹಾಗೂ ಈರುಳ್ಳಿ ಮಾರುಕಟ್ಟೆಗೆ ತೆರಳಿ ವ್ಯಾಪಾರಸ್ಥರು ಮತ್ತು ರೈತರ ಜೊತೆ ಮಾತುಕತೆ ನಡೆಸಿದರು. ರೈತರಿಂದ ಎಷ್ಟು ಹಣಕ್ಕೆ ಖರೀದಿಸಲಾಗಿದೆ ಹಾಗೂ ಎಷ್ಟು ಹಣಕ್ಕೆ ಗ್ರಾಹಕರಿಗೆ ನೀಡಲಾಗುತ್ತಿದೆ ಎನ್ನುವುದನ್ನು ಪರಿಶೀಲಿಸಿದರು.

Advertisement

ಈ ವೇಳೆ ಮಾತನಾಡಿದ ತೋಟಗಾರಿಕಾ ಸಚಿವ ಡಾ. ನಾರಾಯಣ ಗೌಡ ರೈತರು ಬೆಳೆದ ಬೆಳೆ ಮಾರಾಟವಾಗುತ್ತಿಲ್ಲ, ಸಾಗಾಟಕ್ಕೂ ಸಮಸ್ಯೆ ಆಗಿದೆ ಎಂಬ ಆರೋಪ ಇತ್ತು. ಈಗ ಎಲ್ಲ ಸಮಸ್ಯೆ ಪರಿಹರಿಸಲಾಗಿದೆ. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೆರಡು ದಿನಗಳಲ್ಲಿ ಎಲ್ಲ ಸಮಸ್ಯೆ ಸರಿಹೋಗಲಿದೆ. ಗ್ರಾಹಕರಿಗೂ ತರಕಾರಿ, ಹಣ್ಣು ಎಂದಿನಂತೆ ಲಭ್ಯವಾಗಲಿದೆ. ಮಾರುಕಟ್ಟೆ ಆರಂಭವಾಗಿರುವ ಕಾರಣ ರೈತರಿಗೂ ಅನುಕೂಲ, ಜನಸಾಮಾನ್ಯರಿಗೂ ಅನುಕೂಲವಾಗಲಿದೆ. ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಹಾಕಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next