Advertisement

ಪಂಚಮಸಾಲಿ ಸಮುದಾಯಕ್ಕೆ ಮಂತ್ರಿಸ್ಥಾನ ನೀಡಿ

06:00 AM Jun 06, 2018 | Team Udayavani |

ಬೆಂಗಳೂರು: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಲಿಂಗಾಯತ ಕೋಟಾದಡಿ ಪಂಚಮಸಾಲಿ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು
ಮತ್ತು ಲಿಂಗಾಯತರಲ್ಲಿ ಒಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ
ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ 20 ಮಂದಿ ಲಿಂಗಾಯತ ಸಮುದಾಯದ ಶಾಸಕರಿದ್ದಾರೆ. ಕಾಂಗ್ರೆಸ್‌ ನಿಂದ 16, ಜೆಡಿಎಸ್‌ನಿಂದ ನಾಲ್ವರು ಲಿಂಗಾಯತ ಸಮುದಾಯದ ಶಾಸಕರು ಆಯ್ಕೆಯಾಗಿದ್ದಾರೆ. 

Advertisement

ಇವರಲ್ಲಿ ಪಂಚಮಸಾಲಿ ಸಮುದಾಯದ ಶಿವಾನಂದ ಪಾಟೀಲ್‌, ಎಂ.ವೈ. ಪಾಟೀಲ್‌, ಗಣೇಶ್‌ ಹುಕ್ಕೇರಿ, ಲಕ್ಷ್ಮೀ ಹೆಬ್ಟಾಳ್ಕರ್‌ ಹಾಗೂ ಮಹೇಶ್‌ ಕಮಠಳ್ಳಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, ಎಂ.ಸಿ. ಮನಗೂಳಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದಾರೆ. ಹೀಗಾಗಿ ಲಿಂಗಾಯತ ಸಮುದಾಯದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಪಂಚಮಸಾಲಿ ಸಮುದಾಯದ ಶಾಸಕರಿಗೆ ಆದ್ಯತೆ ನೀಡುವಂತೆ ಸ್ವಾಮೀಜಿ ಮನವಿ ಮಾಡಿದ್ದಾರೆ. ಈಗಾಗಲೇ ಈ ಕುರಿತು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹಾಗೂ ಮಾಜಿ ಪ್ರಧಾನಿ ಎಚ್‌  .ಡಿ.ದೇವೇಗೌಡರಿಗೆ ಮನವಿ ಸಲ್ಲಿಸಲಾಗಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿಂದೆ ಜೆ.ಎಚ್‌.ಪಟೇಲ್‌, ಧರ್ಮಸಿಂಗ್‌, ಕುಮಾರಸ್ವಾಮಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಹೆಚ್ಚಿನ
ಸ್ಥಾನ ನೀಡಿದ್ದರು. ಅದರಂತೆ ಈ ಬಾರಿಯೂ ಹೆಚ್ಚಿನ ಸ್ಥಾನ ನೀಡುವ ವಿಶ್ವಾಸ ಇದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next