Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ-ಬಂಡೂರಿಯಿಂದ 4 ಟಿಎಂಸಿ ಅಡಿ ನೀರು ಬಳಕೆಗೆ ಮಹದಾಯಿ ನ್ಯಾಯಾಧೀಕರಣ ಒಪ್ಪಿಗೆ ಸೂಚಿಸಿದೆ. ಇದರ ಅನುಷ್ಠಾನಕ್ಕಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ಅನುಮೋದನೆ ಪಡೆದು ಡಿಪಿಆರ್‌ಗೆ ಯೋಜಿಸಲಾಗಿದೆ. ನ್ಯಾಯಾಧೀಕರಣದಲ್ಲಿ ಆದ ಆದೇಶದಂತೆ ನೀರು ಪಡೆಯುವುದು ನಮ್ಮ ಹಕ್ಕು. ಕಾನೂನಾತ್ಮಕವಾಗಿರುವ ಸಮಸ್ಯೆಗಳನ್ನು ಪರಿಹರಿಸಲು ನೆರೆ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಹೆಜ್ಜೆ ಇರಿಸುವುದು ಅವಶ್ಯ. ಆತುರದ ನಿರ್ಧಾರ, ಹೇಳಿಕೆಗಳಿಂದ ಯೋಜನೆ ಅನುಷ್ಠಾನಕ್ಕೆ ಸಮಸ್ಯೆ ಆಗಬಹುದು. ನಮಗೆ ನೀರು ಬೇಕು. ಕಳಸಾ-ಬಂಡೂರಿ ವಿಷಯದಲ್ಲಿ ಗೊಂದಲದ ಹೇಳಿಕೆ ಕೊಡುವುದು ಬೇಡ ಎಂದರು.
Advertisement
ಕಳಸಾ-ಬಂಡೂರಿ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ
01:05 PM Aug 08, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.