ರಾಂಚಿ : ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ಬಂಧಿಸಲಾಗಿರುವ ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್‌ಎಫ್‌ಐ) ಸಂಘಟನೆಗೆ ಸೇರಿದ ಮೂವರು ನಕ್ಸಲರಲ್ಲಿ 14 ವರ್ಷದ ಬಾಲಕನೂ ಸೇರಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾನುವಾರ ರಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ರಂಗೋಡಿ ಗ್ರಾಮದಲ್ಲಿ ಮೂವರನ್ನು ಬಂಧಿಸಿದ್ದರು.
ವಿಶ್ರಮ್ ಕೊಂಗಾಡಿ ಮತ್ತು ಕುಲೇನ್ ಕೊಂಗಾಡಿ ಎಂದು ಗುರುತಿಸಲಾದ ಇಬ್ಬರು ವಯಸ್ಕ ನಕ್ಸಲರು ಕ್ರಮವಾಗಿ ಏಳು ಮತ್ತು ಐದು ವಿಭಿನ್ನ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಹೇಳಿದ್ದಾರೆ.
ಬಂಧಿತರ ಬಳಿಯಿದ್ದ ಹಲವಾರು ಕಾಟ್ರಿಡ್ಜ್‌ಗಳು, ಪಿಎಲ್‌ಎಫ್‌ಐ ಕರಪತ್ರಗಳು, ದೇಣಿಗೆ ರಸೀದಿಗಳು, ಮೊಬೈಲ್ ಫೋನ್‌ಗಳು ಮತ್ತು ಮೋಟಾರ್‌ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.