Advertisement

ಚಾಮರಾಜನಗರ: ಅಪ್ರಾಪ್ತ ಬಾಲಕಿ ಅಪಹರಿಸಿ ವಿವಾಹ; ಅಪರಾಧಿಗೆ 20 ವರ್ಷ ಶಿಕ್ಷೆ

08:24 PM Apr 20, 2022 | Team Udayavani |

ಚಾಮರಾಜನಗರ: ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿಕೊಂಡು ಮದುವೆಯಾಗಿ ದೈಹಿಕ ಸಂಬಂಧ ಬೆಳೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಜೈಲು  ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

Advertisement

ತಾಲೂಕಿನ ಹೊನ್ನಹಳ್ಳಿ ಗ್ರಾಮದ ಮಹೇಶ್ (ಮಾಯಿ) (28 ವರ್ಷ) ಶಿಕ್ಷೆಗೆ ಗುರಿಯಾದ ಅಪರಾಧಿ.  ಕಳೆದ 2019ರ ಮಾರ್ಚ್ 17ರಂದು 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿಕೊಂಡು ಮದುವೆಯಾಗಿ ನಂತರ ಬೆಂಗಳೂರಿಗೆ ತೆರಳಿ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ವಿಚಾರಣೆ ನಡೆದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಆರೋಪಿತ ವ್ಯಕ್ತಿಗೆ ಪೋಕ್ಸೋ ಕಾಯ್ದೆ ಕಲಂ 6ರ ಅನ್ವಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ತೀರ್ಮಾನ

ಅಲ್ಲದೇ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ ಪರಿಹಾರದ ರೂಪದಲ್ಲಿ 5 ಲಕ್ಷ ರೂ. ಹಣವನ್ನು ಒಂದು ತಿಂಗಳೊಳಗೆ ನೀಡುವಂತೆ ತೀರ್ಪು ನೀಡಿದ್ದಾರೆ.  ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next