Advertisement
ಶಾಲೆಗೆ ಹೊರಟಿದ್ದಾಗ ಅಪಹರಣ: ನಗರದ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ತನ್ನ ಗೆಳತಿಯೊಂದಿಗೆ ಮಂಗಳವಾರ ಶಾಲೆಗೆ ಹೊರಟಿದ್ದಳು. ಆಗ ಆಟೋದಲ್ಲಿ ಬಂದ ದೀಪಕ ಮುಳಸಾವಳಗಿ ಎಂಬಾತ ತನ್ನ ಇಬ್ಬರು ಸ್ನೇಹಿತರೊಂದಿಗೆ ಆಕೆಯನ್ನು ಅಪಹರಿಸಿ ನಗರದ ಹೊರವಲಯಕ್ಕೆ ಕರೆದೊಯ್ದ. ಬಳಿಕ ಇತರ ಆರೇಳು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ. ಬಳಿಕ ಬಾಲಕಿಯ ಕತ್ತು ಹಿಸುಕಿ ಪರಾರಿಯಾಗಿದ್ದಾರೆ. ಜೊತೆಗಿದ್ದ ಗೆಳತಿ ಶಾಲೆಗೆ ತೆರಳಿ ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿದ ಪಾಲಕರು ಹುಡುಕಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಳು.
Related Articles
Advertisement
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ಕುರುಹುಗಳು ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಒಬ್ಬನೇ ಆರೋಪಿ ಅತ್ಯಾಚಾರ ಎಸಗಿರುವ ಮಾಹಿತಿ ಲಭ್ಯವಾಗಿದ್ದು, ಪ್ರಮುಖ ಆರೋಪಿಗಾಗಿ ತನಿಖಾ ತಂಡ ಶೋಧ ನಡೆಸಿದೆ.– ಕುಲದೀಪ ಜೈನ್, ಎಸ್ಪಿ ಆರೋಪಿಗಳ ಬಂಧನಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು:ವಿಜಯಪುರದಲ್ಲಿ ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ತ್ವರಿತವಾಗಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್.ವೀರಯ್ಯ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ಹಾಗೂ ವಕ್ತಾರ ಅಶ್ವಥ್‌ನಾರಾಯಣ, ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ತ್ವರಿತವಾಗಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಘಟನೆಯನ್ನು ರಾಜ್ಯಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರದಲ್ಲಿ ಸಾಧನಾ ಸಂಭ್ರಮ ಯಾತ್ರೆ ನಡೆಸುತ್ತಿದ್ದರೂ ಹತ್ಯೆಗೀಡಾದ ಬಾಲಕಿಯ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಸೌಜನ್ಯ ತೋರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರಾಲಿ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರಾಗಲಿ ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿಲ್ಲ. ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿ ಕೈ ತೊಳೆದುಕೊಳ್ಳಲಾಗಿದೆ. ಪ್ರಾಣಕ್ಕೆ ಬೆಲೆ ಕೊಟ್ಟುವ ಸರ್ಕಾರ ಇದು ಎಂದು ದೂರಿದರು.