Advertisement

ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ; ತೀರ್ಪು ಪ್ರಕಟ: ಆರೋಪಿಗೆ  ಜೈಲು ಶಿಕ್ಷೆ

10:44 PM Aug 01, 2023 | Team Udayavani |

ಕಡಬ: ಹನ್ನೊಂದು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್‌ನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ.

Advertisement

2012ರಲ್ಲಿ ಕುಂತೂರಿನ ರಾಜಿಕ್‌ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ. ಆದರೆ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ನ್ಯಾಯಾಲಯ ಆತನ ಬಂಧನಕ್ಕೆ ವಾರಂಟ್‌ ಹೊರಡಿಸಿತ್ತು. ನಾಲ್ಕು ತಿಂಗಳ ಹಿಂದೆ ಕಡಬ ಪೊಲೀಸರು ಆರೋಪಿ ರಾಜಿಕ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಆತ ನ್ಯಾಯಾಂಗ ಬಂಧನದಲ್ಲಿದ್ದ. ಈ ಪ್ರಕರಣದ ವಿಚಾರಣೆ ನಡೆದು ಪುತ್ತೂರು
2ನೇ ಎ.ಸಿ.ಜೆ. ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿ ಅವರು ಆರೋಪಿ ರಾಜಿಕ್‌ಗೆ ಮೂರು ವರ್ಷ ಆರು ತಿಂಗಳು ಕಾರಾಗೃಹವಾಸ ಮತ್ತು 1,500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ಸಂತ್ರಸ್ತ ಬಾಲಕಿಯ ಪರ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next