Advertisement
ಈ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, “ಇದೊಂದು ಗಂಭೀರ ಹಾಗೂ ಅಷ್ಟೇ ಸೂಕ್ಷ್ಮ ಪ್ರಕರಣ ಆಗಿರುವುದರಿಂದ ಕೇಂದ್ರ ಸರ್ಕಾರ ಸಾಕಷ್ಟು ಮುತವರ್ಜಿಯಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ. ಹಾಗಾಗಿ,ಇನ್ನಷ್ಟು ಸಮಯಾವಕಾಶ ಬೇಕು’ ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿತು. ಶಶಿಧರ ಶಾನುಭೋಗ,ಸತೀಶ್ ಹಾಗೂ ಎನ್.ಪಿ.ಅಮೃತೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ ಮಾಡಿರುವ ಆಯೋಗದ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.