Advertisement
ಈ ವಿಚಾರವಾಗಿ ಉಬೇದುಲ್ಲಾ ಶರೀಫ್ ಎಂಬುವರು ಸಲ್ಲಿಸಿದ್ದ ಸಾರ್ವಜನಿ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
Related Articles
Advertisement
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕಾಲ-ಕಾಲಕ್ಕೆ ಜಾರಿಗೆ ತಂದಿದೆ. ಆ ಯೋಜನೆಗಳ ಅನುಷ್ಠಾನಕ್ಕೆ ಮಾರ್ಗಸೂಚಿಗಳನ್ನು ಸಹ ರೂಪಿಸಲಾಗಿರುತ್ತದೆ. ಮುಖ್ಯವಾಗಿ, ಅನುದಾನ ದುರ್ಬಳಕೆ ಆಗಿಲ್ಲ ಮತ್ತು ಅವ್ಯವಹಾರ ನಡೆದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸುತ್ತಿದೆ. ಹೀಗಿರುವಾಗ, ನ್ಯಾಯಾಲಯ ಮಧ್ಯಪ್ರವೇಶಿಸುವ ಅಥವಾ ಪ್ರಕರಣವನ್ನು ತನಿಖಾ ಸಂಸ್ಥೆಗೆ ವಹಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.
ಒಂದೊಮ್ಮೆ ನಿರ್ದಿಷ್ಟವಾಗಿ ಯಾವುದಾದರೂ ಪ್ರಕರಣದಲ್ಲಿ ಅವ್ಯವಹಾರ ಅಥವಾ ಹಣದ ದುರ್ಬಳಕೆ ಬಗ್ಗೆ ಅರ್ಜಿದಾರರಿಗೆ ಅನುಮಾನವಿದ್ದರೆ ಅವರು ಲೋಕಾಯುಕ್ತ ಅಥವಾ ಕೇಂದ್ರ ವಿಚಕ್ಷಣ ಆಯುಕ್ತರಿಗೆ ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.