Advertisement

ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ: ಸಿಎಂ ಬೊಮ್ಮಾಯಿ

12:37 PM Dec 02, 2022 | Team Udayavani |

ಧಾರವಾಡ: ರಾಜ್ಯಾದ್ಯಂತ ಅನಧಿಕೃತ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಭಾರತ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.

ಇದನ್ನೂ ಓದಿ;“ಡಂಕಿ” ಚಿತ್ರೀಕರಣ ಮುಕ್ತಾಯ…ನಟ ಶಾರುಖ್ ಖಾನ್ ಮೆಕ್ಕಾಗೆ ಭೇಟಿ, ಫೋಟೋ ವೈರಲ್

ಕನ್ನಡಿಗನ ಮೇಲೆ ಹಲ್ಲೆ- ತನಿಖೆಗೆ ಆದೇಶ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next