Advertisement
ಬಂಟರ ಸಂಘ ಮುಂಬಯಿ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣೆ ಹಾಗೂ ದತ್ತು ಸ್ವೀಕಾರ ಕಾರ್ಯಕ್ರಮವು ಜೂ. 24 ರಂದು ಮೀರಾರೋಡ್ ಸೆಕ್ಟರ್ 10ರ ಸ್ವಾಮಿ ನಾರಾಯಣ ಮಂದಿರದಲ್ಲಿ ಸಭಾಗೃಹದಲ್ಲಿ ಜರಗಿದ್ದು, ಸಮಾರಂಭವನ್ನು ಉದ್ಘಾಟಿಸಿ, ಆರ್ಥಿಕ ನೆರವು ವಿತರಣೆ ಹಾಗೂ ದತ್ತು ಸ್ವೀಕಾರದ ಬಳಿಕ ಮಾತನಾಡಿದ ಪದ್ಮನಾಭ ಎಸ್. ಪಯ್ಯಡೆ ಅವರು, ದಾನಿಗಳ ಸಹಕಾರದಿಂದ ಈ ಸಲ ದೊಡ್ಡ ಮೊತ್ತದ ಆರ್ಥಿಕ ನೆರವು ನೀಡಲಾಗಿದೆ. ಮುಂಬಯಿಯ ಉಪನಗರದಲ್ಲಿರುವ ಸಂಘದ 9 ಪ್ರಾದೇಶಿಕ ಸಮಿತಿಗಳು ಉತ್ತಮ ವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಸಹಕಾರದೊಂದಿಗೆ ಸಂಘವು ಇನ್ನಷ್ಟು ಶೈಕ್ಷಣಿಕ ಯೋಜನೆಗಳನ್ನು ತಂದು, ಪ್ರತೀ ಉಪನಗರಗಳಲ್ಲಿ ಕಾಲೇಜು ನಿರ್ಮಾಣದ ಉದ್ದೇಶವನ್ನು ಹೊಂದಲಾಗಿದ್ದು, ದಾನಿಗಳ ಸಹಕಾರ ಸದಾಯಿರಲಿ ಎಂದು ನುಡಿದರು.
Related Articles
Advertisement
ಸಂಘದ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜಿನಿ ಎಸ್. ಹೆಗ್ಡೆ, ಪ್ರಾದೇಶಿಕ ಸಮಿತಿಯ ಸಂಚಾಲಕ ಅರುಣೋದಯ ರೈ, ಉಪ ಕಾರ್ಯಾಧ್ಯಕ್ಷರುಗಳಾದ ಎಲಿಯಾಳ ಉದಯ ಹೆಗ್ಡೆ, ಮುನ್ನಲಾಯಿಗುತ್ತು ಸಚ್ಚಿದಾನಂದ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಾಪಾಡಿಗುತ್ತು, ಕೋಶಾಧಿಕಾರಿ ಉದಯ ಶೆಟ್ಟಿ ಪೆಲತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಮಿತಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಯಿಪ್ರಸಾದ್ ಪೂಂಜಾ, ಜತೆ ಕಾರ್ಯಾದರ್ಶಿ ಶಂಕರ ಶೆಟ್ಟಿ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಶೆಟ್ಟಿ, ಕಾರ್ಯದರ್ಶಿ ನಿಧಿ ಶೆಟ್ಟಿ, ಕೋಶಾಧಿಕರಿ ರಮೇಶ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಅಡ್ಯಾರು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೀರಾರೋಡ್‌ನ ಜನಪ್ರಿಯ ವೈದ್ಯ ಡಾ| ಭಾಸ್ಕರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಬಂಟರ ಸಂಘ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್ ಸ್ವಾಗತಿಸಿದರು. ಬಾಬಾ ಪ್ರಸಾದ್ ಅರಸ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಶೆಟ್ಟಿ ಅವರು ವಂದಿಸಿದರು.