Advertisement

Misappropriation Fund: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

01:18 AM Aug 24, 2024 | Team Udayavani |

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಬೆನ್ನಲ್ಲೇ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌, ಪಂಚಾಯತ್‌ಗಳಿಗೆ ಮೀಸಲಿಟ್ಟ ಬಳಕೆಯಾದ ಹಣ ದುರುಪಯೋಗ ಆಗಿದೆ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೂಂದು ದೂರು ನೀಡಿದ್ದಾರೆ.

Advertisement

ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ನಲ್ಲಿ ಮೀಸಲಿಟ್ಟ ಬಳಕೆಯಾಗದ ಹಣ ನಾಪತ್ತೆಯಾಗಿದೆ. ಇದು ದುರುಪಯೋಗ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಇದಕ್ಕೆ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ನೇರ ಹೊಣೆ. ಹಾಗಾಗಿ, ತತ್‌ಕ್ಷಣ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೋರಿದ್ದಾರೆ.

ಜಿ.ಪಂ. ಮತ್ತು ತಾ.ಪಂ.ನಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದವರೇ ಹೆಚ್ಚಿದ್ದಾರೆ. ಅವರಿಗೆ ಮೀಸಲಿಟ್ಟ ಹಣ ಯಾವುದಕ್ಕೆ ಬಳಕೆ
ಯಾಗಿದೆ ಎಂಬುದರ ತನಿಖೆ ಆಗಬೇಕು. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದೇನೆ. ಅಷ್ಟೇ ಅಲ್ಲ, ಸಾರ್ವಜನಿಕ ಲೆಕ್ಕಪತ್ರ ಸಮಿತಿಗೂ ದೂರು ಸಲ್ಲಿಸಿದ್ದೇನೆ ಎಂದು ಹೇಳಿದರು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next