Advertisement

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

11:43 AM May 27, 2024 | Team Udayavani |

ಬೆಂಗಳೂರು: ಡ್ರಗ್ಸ್‌ ಅಮಲಿನಲ್ಲಿ ಅಪ್ರಾಪ್ತೆ ಜತೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಸಾರ್ವಜನಿಕರೇ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿ ಗೊಪ್ಪಿಸಿರುವ ಘಟನೆ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಬ್ಯಾಡರಹಳ್ಳಿ ನಿವಾಸಿ ಯುವಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಠಾಣೆ ವ್ಯಾಪ್ತಿಯ ಕಾಲೇಜುವೊಂದರಲ್ಲಿ ಶನಿ ವಾರ ಸಂಜೆ ಕಾರ್ಯಕ್ರಮ ಆಯೋಜಿಸ ಲಾಗಿತ್ತು. ಈ ವೇಳೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಆಗ ಒಂದು ಗುಂಪಿನ ಯುವಕ ನೇರವಾಗಿ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದ. ಮತ್ತೂಂದು ಗುಂಪಿನ ಯುವಕ ಮಾಗಡಿ ಮುಖ್ಯರಸ್ತೆಯಲ್ಲಿರುವ ಆಸ್ಪತ್ರೆಗೆ ಹೋಗಿದ್ದಾನೆ. ಇನ್ನು ಆಸ್ಪತ್ರೆಗೆ ಹೋಗಿದ್ದ ಯುವಕ ಡ್ರಗ್ಸ್‌ ಅಮಲಿನಲ್ಲಿ ಅಪ್ರಾಪ್ತೆ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಅದರಿಂದ ಆಕ್ರೋಶಗೊಂಡ ಆಕೆಯ ಪೋಷಕರು ಹಾಗೂ ಸ್ಥಳೀಯರು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ವಿಚಾರ ತಿಳಿದ ಹೊಯ್ಸಳ ಪೊಲೀಸರು ಕೂಡಲೇ ಆಸ್ಪತ್ರೆ ಬಳಿ ಹೋಗಿ, ಯುವಕನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಬಳಿಕ ಘಟನೆ ಬಗ್ಗೆ ಸಂಬಂಧ ಪಟ್ಟವರಿಗೆ ದೂರು ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ, ಯಾರು ದೂರು ನೀಡಿಲ್ಲ. ಹೀಗಾಗಿ ಆರೋಪಿ ಯಿಂದ ಮಾದಕ ವಸ್ತು ಸೇವನೆ ವಿಚಾರಕ್ಕೆ ಸಂಬಂಧಿ ಸಿದಂತೆ ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next