Advertisement
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾಕರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲಿಂಗತ್ವ ಅಲ್ಪ ಸಂಖ್ಯಾಕರು ಮುಖ್ಯವಾಹಿನಿಯಲ್ಲಿ ಬಾಳಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡಲಾಗುವುದು. ಜಿಲ್ಲೆಯ ಟೋಲ್‌ಗಳಲ್ಲಿ ಅನಗತ್ಯವಾಗಿ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ತೊಂದರೆ ನೀಡುವ ಲಿಂಗತ್ವ ಅಲ್ಪಸಂಖ್ಯಾಂಕರ ವಿರುದ್ದ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಂತವರ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದರು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಲಿಂಗತ್ವ ಅಲ್ಪ ಸಂಖ್ಯಾಕರಿಂದ ತೊಂದರೆಯಾದರೆ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಆ ರೀತಿ ಆಗದಂತೆ ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ಒಳ್ಳೆಯ ಭಾವನೆ ಬರುವ ರೀತಿಯಲ್ಲಿ ವರ್ತಿಸಬೇಕು. ಜಿಲ್ಲೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾಕರ ಸರ್ವೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
Related Articles
Advertisement
ಶಾಸಕ ರಘುಪತಿ ಭಟ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾಕರು ಸಮಾಜದಲ್ಲಿ ಹೊಂದಿಕೊಂಡು ಹೋಗಬೇಕು. ಹೊರ ಜಿಲ್ಲೆಯಿಂದ ಬಂದು ಇಲ್ಲಿನ ಟೋಲ್‌ಗಳಲ್ಲಿ ಸಮಸ್ಯೆ ಉಂಟು ಮಾಡುವ ಹಾಗೂ ಅನೈತಿಕ ಚಟುವಟಿಕೆ ನಡೆಸುವವರ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಬೆಂಗಳೂರಿನ ಪಯಣ ಸಂಘಟನೆಯ ಚಾಂದಿನಿ, ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಸಂಜೀವ ವಂಡ್ಸೆ ಮತ್ತಿತರರು ಸಮುದಾಯದ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹೊÉàಟ್, ಎಎಸ್‌ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಗುರುತು ಚೀಟಿಲಿಂಗತ್ವ ಅಲ್ಪಸಂಖ್ಯಾಕರ ಬಗ್ಗೆ ಸಮಾಜದಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಪೊಲೀಸ್ ಇಲಾಖೆಗೆ ಈ ಬಗ್ಗೆ ಪ್ರತ್ಯೇಕ ಕಾರ್ಯಾಗಾರ ನಡೆಸಲಾಗುವುದು. ಮೈತ್ರಿ ಯೋಜನೆಯಲ್ಲಿ ಎಲ್ಲ ಲಿಂಗತ್ವ ಅಲ್ಪ ಸಂಖ್ಯಾಕರ ಪ್ರಯೋಜನ ಪಡೆಯುವಲ್ಲಿ ತಹಶೀಲ್ದಾರ್‌ಗಳು ಗಮನಹರಿಸಿ ಶೀಘ್ರದಲ್ಲಿ ಅವರಿಗೆ ಗುರುತು ಚೀಟಿ ವಿತರಿಸುವಂತೆ ಸೂಚಿಸಿದರು.