Advertisement
ನಗರದ ಆರ್.ವಿ.ಎಸ್. ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲೆಯ ಬೂತ್ ಮಟ್ಟದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಅಧಿಕಾರದ ದರ್ಪದಿಂದ ಜನರ ಮೇಲೆ ದರ್ಪ, ಶೋಷಣೆ ನಡೆಸುತ್ತಿರುವವರಿಗೆ ಈ ಬಾರಿಯ ಚುನಾವಣೆ ತಕ್ಕ ಉತ್ತರ ನೀಡಲಿದೆ ಎಂದರು.
Related Articles
Advertisement
ಬಿಜೆಪಿ ಅಭ್ಯರ್ಥಿಯ ಗೆಲವಿಗೆ ಶ್ರಮ: ಮುಂದುವರೆಸಿದ ಸಿ.ಪಿ.ಯೋಗೇಶ್ವರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭ್ಯರ್ಥಿ ಯಾರು ಎಂಬ ಬಗ್ಗೆ ಸುಳಿವು ನೀಡಲಿಲ್ಲ. ತಮ್ಮದು ರಾಷ್ಟ್ರೀಯ ಪಕ್ಷ. ವರಿಷ್ಠರು ಸೂಚಿಸಿದರೆ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವುದಾಗಿ. ಇಲ್ಲದಿದ್ದರೆ ಸ್ಪರ್ಧಿಸಿದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು. ವಿಧಾನಸಭಾ ಚುನಾವಣೆಗಳ ನಂತರ ತಾವು ಪಕ್ಷದ ಚಟುವಟಿಕೆಗಳಿಂದ, ಕಾರ್ಯಕರ್ತರಿಂದ ದೂರ ಇದ್ದಿದ್ದಾಗಿ ಆದರೆ ಇನ್ನು ಮುಂದೆ ಪಕ್ಷದ ಚಟುವಟಿಕೆಗಳಲ್ಲಿ ತಪ್ಪದೆ ಭಾಗವಹಿಸುವುದಾಗಿ ಹೇಳಿದರು.
ಜನಸಾಮಾನ್ಯರಿಗೆ ಅರಿವು ಮೂಡಿಸಿ: ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಮುನಿರಾಜು ಮಾತನಾಡಿ, ರಾಮನಗರ ಜಿಲ್ಲೆಯಲ್ಲಿ ಕೆಲವರು ತಮ್ಮ ದಬ್ಟಾಳಿಕೆ, ದೌರ್ಜನ್ಯವನ್ನು ತಡೆಗಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬೀಗುತ್ತಿದ್ದಾರೆ. ಇಂತವರಿಗೆ ಸೂಕ್ತ ಪಾಠ ಕಲಿಸಬೇಕಾಗಿದೆ. ರಾಮನಗರ ಉಪಚುನಾವಣೆಯಲ್ಲಿ ಪಕ್ಷಕ್ಕೆ ಆದ ಮುಜುಗರದ ವಿರುದ್ಧ ಸೇಡನ್ನು ತೀರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಅನುದಾನದಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳು ಕ್ಷೇತ್ರ ವ್ಯಾಪ್ತಿಯಲ್ಲಾಗಿದೆ. ಆದರೆ, ಸಂಸದ ಡಿ.ಕೆ.ಸುರೇಶ್ ಇದಕ್ಕೆಲ್ಲ ತಮ್ಮ ಶ್ರಮ ಎಂದು ಹೇಳಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಈ ವಿಚಾರಗಳನ್ನು ಪಕ್ಷದ ಕಾರ್ಯಕರ್ತರು ಜನಸಾಮಾನ್ಯರು ಮತ್ತು ಮತದಾರಿಗೆ ತಿಳಿಸಬೇಕಾಗಿದೆ ಎಂದರು.
ನಿಷ್ಠಾವಂತರಿಗೆ ಟಿಕಟ್ ಕೊಡಿ: ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಪ್ರವೀಣ್ ಗೌಡ ಮಾತನಾಡಿ, ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ವರಿಷ್ಠರದನ್ನು ಒತ್ತಾಯಿಸಿದರು. ಪಕ್ಷಾಂತರ ಮಾಡಿದವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ಕೊಟ್ಟು ಅವಮಾನ ಅನುಭವಿಸಲಾಗಿದೆ. ಹೀಗಾಗಿ ನಿಷ್ಠಾವಂತರನ್ನು ಗುರುತಿಸಿ ಟಿಕೆಟ್ ಕೊಡಿ. ಅಭ್ಯರ್ಥಿ ಯಾರೇ ಆದರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಹಪ್ರಭಾರಿ ಜಿ.ಮರಿಸ್ವಾಮಯ್ಯ, ಬಿಜೆಪಿ ಪ್ರಮುಖರಾದ ಬಿ.ನಾಗೇಶ್, ಪಿ.ರವಿಕುಮಾರ್, ಎಸ್.ಆರ್.ನಾಗರಾಜು, ಆರ್.ವಿ.ಸುರೇಶ್, ಚಂದ್ರಶೇಖರ ರೆಡ್ಡಿ, ನರಸಿಂಹಯ್ಯ, ಪಿ.ರವಿಕುಮಾರ್, ಗುಲಾಬ್ ಜಾನ್, ಮಲವೇಗೌಡ, ಎಂ. ವಿಜಯ ಕುಮಾರ್ ಮುಂತಾದವರು ಹಾಜರಿದ್ದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುರಳೀಧರ ಸ್ವಾಗತಿಸಿದರು. ಜಿ.ವಿ.ಪದ್ಮನಾಭ ನಿರೂಪಿಸಿದರು. ವರದರಾಜ ಗೌಡ ವಂದಿಸಿದರು.ನರೇಂದ್ರ ಮೋದಿ ಸರ್ಕಾರದ ಸಾಧನೆಗಳೇ ಗೆಲುವಿನ ಮಂತ್ರ: ದೇಶದ ಪ್ರಧಾನಿಯಾಗಿ ನರೇಂದ್ರಮೋದಿ ಅವರು ನಿಸ್ವಾರ್ಥದಿಂದ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಾಡಿರುವ ಸಾಧನೆಗಳೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ಮಂತ್ರವಾಗಲಿದೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದರು. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷದ ಪದಾಧಿಕಾರಿಗಳಾಗಿರುವವರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಬದಲಿಗೆ ಬೇರೊಬ್ಬರನ್ನು ನೇಮಿಸಲಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಮಾಡಲು ಸಣ್ಣಪುಟ್ಟ ಪಕ್ಷಗಳು ಒಂದಾಗಿವೆ. ತಮ್ಮ ಕುಟುಂಬದವರನ್ನು, ಮಕ್ಕಳನ್ನು ಶಾಸಕರನ್ನಾಗಿ, ಸಚಿವರನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಇವರಿಗೆಲ್ಲಾ ದೇಶದ ಅಭಿವೃದ್ಧಿ ಬೇಕಾಗಿಲ್ಲ. ಇಂತಹವರ ವಿರುದ್ಧ ಜನರ ತಕ್ಕ ಪಾಠ ಕಲಿಸಬೇಕು ಎಂದರು. ಗೂಂಡಾಗಿರಿಗೆ ಹೆದರದಿರಿ: ಜಿಲ್ಲೆಯಲ್ಲಿ ನಕಲಿ ಮತದಾನವನ್ನು ತಡೆಯಬೇಕಾಗಿದೆ. ಈ ವಿಚಾರದಲ್ಲಿ ಕನಕಪುರದ ಸಹೋದರರ ಗೂಂಡಾಗಿರಿಗೆ ಯಾರೂ ಹೆದರಿಕೊಳ್ಳಬೇಕಾಗಿಲ್ಲ. ಪಕ್ಷದ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚರ ವಹಿಸಬೇಕು. ಕಡ್ಡಾಯವಾಗಿ ಮತ ಹಾಕುವಂತೆ ಮತದಾರರು ಮನವೊಲಿಸಿ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್ ಸಲಹೆ ನೀಡಿದರು.