Advertisement
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನಿಂದ ಹತಾಶರಾಗಿರುವ ಕಾಂಗ್ರೆಸ್‌ನವರು ಬಿಟ್‌ಕಾಯಿನ್ ವಿಚಾರದಲ್ಲಿ ಇಲ್ಲಸಲ್ಲದ ಆರೋಪಗಳ ಮಾಡುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಹತಾಶೆಯಿಂದ ಟೀಕಿಸುತ್ತಿದ್ದಾರೆ ಎಂದು ಹರಿಹಾಯ್ದರು.
Related Articles
Advertisement
ಬಿಟ್ ಕಾಯಿನ್ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿಯವರೇ ಹೇಳಿದ್ದಾರೆ. ಯಾವುದೇ ರೀತಿಯ ತನಿಖೆಗೂ ಸಿದ್ಧ ಎಂದಿದ್ದಾರೆ. ಆದರು ಇಲ್ಲಸಲ್ಲದ ಆರೋಪ ಮಾಡುವುದು ಶೋಭೆ ತರುವಂತದ್ದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಲ್ಲ ಸಮಾಜದ ಮೀಸಲಾತಿ ಬೇಡಿಕೆಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ವಿಚಾರ ಸೇರಿದಂತೆ ಬಹುತೇಕ ಸಮಾಜಗಳ ಬೇಡಿಕೆ ಬಗ್ಗೆ ಮುಖ್ಯಮಂತ್ರಿಯವರು ಸ್ಪಂದಿಸಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಸಮಾಜದ ಸ್ವಾಮೀಜಿಗಳು ಆತಂಕ ಪಡಬಾರದು ಎಂದು ಮನವಿ ಮಾಡಿದರು.
ಹಾನಗಲ್ ನಲ್ಲಿ ನಾವು ಎಲ್ಲೋ ಎಡವಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ಸಾಕಷ್ಟು ಪ್ರಯತ್ನ ಮಾಡಿದರೂ ಜಯ ಸಿಕ್ಕಲಿಲ್ಲ. ಮುಂದಿನ ದಿನಗಳ ಸರಿ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ವಿಧಾನ ಸಭಾ ಚುನಾವಣೆಗೆ ಇನ್ನು ಕಾಲಾವಕಾಶ ಇದೆ. ಉಪಾಧ್ಯಕ್ಷನಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ. ಚುನಾವಣೆಗೆ ನಿಲ್ಲಬೇಕೋ, ಬೇಡವೋ, ನಿಂತರೆ ಎಲ್ಲಿ ನಿಲ್ಲಬೇಕು ಎನ್ನುವುದನ್ನ ಪಕ್ಷದ ಮುಖಂಡರು ನಿರ್ಧರಿಸುತ್ತಾರೆ. ಎಲ್ಲಿ ನಿಲ್ಲಲೋ ಪಕ್ಷ ಹೇಳುತ್ತದೆಯೋ ಆ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ಬದಲಾವಣೆ ವಿಚಾರ ಕೇವಲ ಊಹಾಪೋಹ ಅಷ್ಟೇ. ಪಕ್ಷ ಎಲ್ಲ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಸಂಘಟನೆ ವಿಚಾರದಲ್ಲಿ ಬಲಶಾಲಿ ಆಗುತ್ತಿದೆ. ಹಾಗಾಗಿ ರಾಜ್ಯ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಯಾರೂ ಸಹ ತಲೆ ಕೆಡಿಸಿಕೊಳ್ಳುವಂತಗ ಅಗತ್ಯವೇ ಇಲ್ಲ. ಕಟೀಲ್ ಅವರು ಅವಧಿಯನ್ನ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.