ಫ್ಲೋರಿಡಾ: ಅಮೆರಿಕಾದ ಫ್ಲೋರಿಡಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮೆಕ್ಸಿಕೊದ ಆ್ಯಂಡ್ರಿಯಾ ಮೆಝಾ (26ವರ್ಷ) 69ನೇ ಮಿಸ್ ಯೂನಿವರ್ಸ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಇದನ್ನೂ ಓದಿ:ನಾರದ ಸ್ಟಿಂಗ್ ಪ್ರಕರಣ: ಪಶ್ಚಿಮ ಬಂಗಾಳ ಸಚಿವ ಹಕೀಮ್ ಸೇರಿದಂತೆ ನಾಲ್ವರನ್ನು ಬಂಧಿಸಿದ ಸಿಬಿಐ
ಫ್ಲೋರಿಡಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಗೆದ್ದ ಮಿಸ್ ಮೆಕ್ಸಿಕೋಗೆ ದಕ್ಷಿಣ ಆಫ್ರಿಕಾದ ಮಾಜಿ ಮಿಸ್ ಯೂನಿವರ್ಸ್ ಜೊಜಿಬಿನಿ ತುಂಝಿ ಕಿರೀಟವನ್ನು ತೊಡಿಸಿದರು.
ವಿಶ್ವಸುಂದರಿ ಸ್ಪರ್ಧೆಯಲ್ಲಿ ಬ್ರೆಜಿಲ್ ನ ಜೂಲಿಯಾ ಗಾಮಾ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ಪೆರುವಿನ ಜಾನಿಕ್ ಮಸೆಟಾ ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ 22 ವರ್ಷದ ಅಡ್ಲೈನ್ ಕ್ವಾಡ್ರಸ್ ಕ್ಯಾಸ್ಟಲಿನೊ ಮೂರನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ.
ಆ್ಯಂಡ್ರಿಯಾ ಮೆಝಾ ಸಾಫ್ಟ್ ವೇರ್ ಇಂಜಿನಿಯರ್, ಅಲ್ಲದೇ ಈಕೆ ಮಹಿಳಾ ಹಕ್ಕುಗಳ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಧಿಕೃತ ಮೇಕಪ್ ಆರ್ಟಿಸ್ಟ್ ಆಗಿರುವ ಆ್ಯಂಡ್ರಿಯಾ, ಚಿಹೋವಾ ನಗರದ ಪ್ರವಾಸೋದ್ಯಮ ಬ್ರ್ಯಾಂಡ್ ರಾಯಭಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.