ಮೈಸೂರು: ಎನ್.ಆರ್. ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾ ಧಾನಗೊಂಡ ಶಾಸಕರ ಬೆಂಬಲಿಗರು ಹಾಗೂ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬೆಂಬಲಿಗನೊಬ್ಬ ಸೀಮೆಎಣ್ಣೆ ಸುರಿದು ಬೆಂಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗ ನಡೆಯಿತು. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ತನ್ವೀರ್ ಸೇಠ್ ಅವರಿಗೆ ಮಂತ್ರಿಸ್ಥಾನ ಸಿಗಬಹುದೆಂದು ಬೆಂಬಲಿಗರು, ಕಾಂಗ್ರೆಸ್ ಕಾರ್ಯ ಕರ್ತರು ಭಾರೀ ನಿರೀಕ್ಷೆ ಹೊಂದಿದ್ದರು.
ಆದರೆ ಬೆಂಗಳೂರಿನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತನ್ವೀರ್ ಸೇಠ್ ಹೆಸರು ಇಲ್ಲದಿರುವುದು ಗೊತ್ತಾಗು ತ್ತಿದ್ದಂತೆ ಬೆಂಬಲಿಗರು ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು. ನಗರದ ಮೈಸೂರು-ಬೆಂಗಳೂರು ರಸ್ತೆಯ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು,
ತನ್ವೀರ್‌ಸೇಠ್ಗೆ ಸಚಿವಸ್ಥಾನ ಕೈತಪ್ಪಿಸಿದ ಹಿರಿಯ ನಾಯಕರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಈ ವೇಳೆ ರಸ್ತೆತಡೆ ನಡೆಸುವ ಜತೆಗೆ ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನ ಹೊರ ಹಾಕಿದರು.
ಇದೇ ವೇಳೆ ತಮ್ಮ ನೆಚ್ಚಿನ ನಾಯಕನಿಗೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿದ್ದ ತನ್ವೀರ್‌ಸೇಠ್ ಕಟ್ಟಾ ಬೆಂಬಲಿಗನೊಬ್ಬ ಮೈಮೇಲೆ ಸೀಮೆಎಣ್ಣೆ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ. ಏಕಾಏಕಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ಈತನ ಪ್ರಯತ್ನವನ್ನು ಸ್ಥಳದಲ್ಲಿದ್ದ ಇತರೆ ಪ್ರತಿಭಟನಾಕಾರರು ತಡೆಯಲು ಯತ್ನಿಸಿದರು.
ಹೀಗಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದವನನ್ನು ಸುತ್ತುವರಿದು ಆತನ ಮೇಲೆ ನೀರು ಸುರಿದು ಅನಾಹುತವನ್ನು ತಪ್ಪಿಸಿದರು. ಬಳಿಕ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಪೊಲೀಸರು ಎಲ್ಲರನ್ನು ಚದುರಿಸಿದರು.
ಕಾರ್ಯಕರ್ತರ ದಿಢೀರ್ ಪ್ರತಿಭಟನೆ ನ್ನೆಲೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಪರದಾಡುವಂತಾಯಿತು. ಪ್ರತಿ ಭಟನೆಯಲ್ಲಿ ಶೌಕತ್‌ಪಾಷ, ಶಕೀಲ್ ಬೇಗ್, ಮೊಹಮ್ಮದ್ ಅಕ್ರಂ, ಮಂಜುನಾಥ್, ಶೌಕತ್ ಆಲಿಖಾನ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.