Advertisement

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

12:29 AM Sep 28, 2023 | Team Udayavani |

ಕುಂಬಳೆ: ಅಣ್ಣ ತಂಗಿಯರ ಮಕ್ಕಳಾದ 15ರ ಹರೆಯದ ಹಾಗೂ 22ರ ಹರೆಯದ ಹೆಣ್ಮಕ್ಕಳು ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಕುಂಬಳೆ ಹಾಗೂ ಮಂಜೇಶ್ವರ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

ಸೆ. 24ರಂದು ವರ್ಕಾಡಿ ನಿವಾಸಿ 15ರ ಹರೆಯದ ಬಾಲಕಿಯ ಹೆತ್ತವರು ಉಳ್ಳಾಲದಲ್ಲಿ ನಡೆದಿದ್ದ ವಿವಾಹಕ್ಕೆ ತೆರಳಿದ್ದರು. ಇಬ್ಬರು ಹೆಣ್ಮಕ್ಕಳ ಸಹಿತ ನಾಲ್ವರು ಮಕ್ಕಳು ಮನೆಯಲ್ಲಿ ಉಳಿದುಕೊಂಡಿದ್ದರು. ಸಂಜೆ ಮನೆಗೆ ವಾಪಸಾದಾಗ ಮಗಳು ನಾಪತ್ತೆಯಾಗಿದ್ದಳು. ಉಳಿದ ಮಕ್ಕಳಲ್ಲಿ ಪ್ರಶ್ನಿಸಿದಾಗ ಬಾಲಕಿ ಮುಟ್ಟಂಗೆ ತೆರಳಿರುವುದಾಗಿ ತಿಳಿಸಿದ್ದಾರೆ.

ಬಾಲಕಿಯ ತಂದೆ ಮುಟ್ಟಂನಲ್ಲಿರುವ ಸಹೋದರಿಯ ಮನೆಗೆ ಕರೆ ಮಾಡಿ ವಿಚಾರಿಸಿದಾಗ ತನ್ನ 22ರ ಹರೆಯದ ಯುವತಿಯೂ ನಾಪತ್ತೆಯಾಗಿದ್ದಾಳೆಂದು ತಿಳಿಸಿ ದ್ದಾರೆ. ಈ ಇಬ್ಬರು ಜತೆಯಾಗಿ ಹೋಗಿರಬಹುದೆಂದು ಶಂಕಿಸಿ ಇತರೆಡೆ ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಮತು ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ನಡೆಸಿದ ತನಿಖೆಯಲ್ಲಿ ಇವರಿಬ್ಬರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಆಗಿರುವುದು ತಿಳಿದು ಬಂದಿದೆ.

ಇವರ ಪತ್ತೆಗೆ ವಿವಿಧ ಸ್ಥಳಗಳಲ್ಲಿರುವ ಸಿಸಿಟಿವಿ ಕೆಮರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next