Advertisement

Manjeshwara; ನಾಪತ್ತೆಯಾದ ಯುವತಿ ಮತಾಂತರ

06:53 PM Jun 18, 2024 | Team Udayavani |

ಮಂಜೇಶ್ವರ: ನಾಪತ್ತೆಯಾಗಿದ್ದ ಯುವತಿ ಮತಾಂತರಗೊಂಡು ಪ್ರಿಯತಮನನ್ನು ವಿವಾಹವಾಗಿದ್ದು, ಘಟನೆ ಬಗ್ಗೆ ಮಂಜೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿ ಹಾಗೂ ಸಮೀಪದ ಇತರ ಪ್ರದೇಶಗಳಲ್ಲಿ ಎಚ್ಚರಿಕೆಯಿಂದಿರಬೇಕು ಎಂದು ರಹಸ್ಯ ತನಿಖಾ ಏಜೆನ್ಸಿಗಳು ಮುನ್ನೆಚ್ಚರಿಕೆ ನೀಡಿವೆ.

Advertisement

ಮಂಜೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯ 24ರ ಹರೆಯದ ಇಷಾ ಜೂನ್‌ 7ರಂದು ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಮನೆಯವರು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಂತೆ ಈಕೆ ಆಯಿಷ ಸಾರ ಹೆಸರಿಟ್ಟುಕೊಂಡು ಉಳ್ಳಾಲ ನಿವಾಸಿಯಾದ ಯುವಕನನ್ನು ವಿವಾಹವಾಗಿ ಮರಳಿದ್ದಾಳೆ. ಬೆಂಗಳೂರಿನಲ್ಲಿ ಇವರಿಬ್ಬರ ವಿವಾಹ ನಡೆದಿದೆ ಎಂದು ಪೊಲೀಸರು ನಡೆಸಿದ ತನಿಖೆಯಿಂದ ತಿಳಿದು ಬಂದಿದೆ. ಇದೇ ವೇಳೆ ಇಷಾ ಎರಡು ವರ್ಷಗಳ ಹಿಂದೆಯೇ ಮತಾಂತರಗೊಂಡಿರುವುದಾಗಿಯೂ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next